ಬಿಜೆಪಿ ಸರ್ಕಾರ ದಲಿತರಿಗೆ ದ್ರೋಹ ಮಾಡಿದೆ : ಸಿದ್ದರಾಮಯ್ಯ!

siddaramaiah

ರಾಜ್ಯ(State) ಬಿಜೆಪಿ ಸರ್ಕಾರ(BJP Government) ದಲಿತ ಸಮುದಾಯದ ಅಭಿವೃದ್ದಿಗಾಗಿ ಬಜೆಟ್‍ನಲ್ಲಿ ಮೀಸಲಿಟ್ಟಿದ್ದ ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಕೆ ಮಾಡುವ ಮೂಲಕ ದಲಿತ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಆರೋಪಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗಾಗಿ ಮೀಸಲಿಟ್ಟ ಹಣವನ್ನು ಮೂಲಸೌಕರ್ಯಕ್ಕೆ ವಿನಿಯೋಗಿಸಲಾಗಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾಯ್ದೆ ಅನ್ವಯ ರಾಜ್ಯದ ಒಟ್ಟು ಬಜೆಟ್‍ನ ಶೇಕಡಾ 24.1ರಷ್ಟು ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿಗಾಗಿ ಮೀಸಲಿಡಬೇಕು. ಒಂದು ವೇಳೆ ಆರ್ಥಿಕ ವರ್ಷದಲ್ಲಿ ಆ ಹಣ ಬಳಕೆಯಾಗದಿದ್ದರೆ, ಮತ್ತೆ ಮುಂದಿನ ಆರ್ಥಿಕ ವರ್ಷ ಆ ಹಣವನ್ನು ಖರ್ಚು ಮಾಡಬೇಕು.

ನಿಗದಿತ ಉದ್ದೇಶಕ್ಕಾಗಿ ಮಾತ್ರ ಹಣವನ್ನು ಖರ್ಚು ಮಾಡಲು ಅವಕಾಶವಿದೆ. ಅದೇ ರೀತಿ ನಿಗದಿತ ಉದ್ದೇಶಕ್ಕಾಗಿ ಆ ಹಣವನ್ನು ಖರ್ಚು ಮಾಡದೆ ಇದ್ದರೆ ಅಂತಹ ಅಧಿಕಾರಿಯ ವಿರುದ್ದ ಕ್ರಮ ಕೈಗೊಳ್ಳಲು ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾಯ್ದೆಯಲ್ಲಿ ಅವಕಾಶವಿದೆ. ಇನ್ನು 2021-22ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾಯ್ದೆ ಅನ್ವಯ ಒಟ್ಟು ಬಜೆಟ್ 24.1 ಅಂದರೆ 26,695.64 ಕೋಟಿ ರೂಪಾಯಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿ ಯೋಜನೆಗಳಿಗಾಗಿ ಮಾತ್ರ ಬಳಸಬೇಕು.

ಆದರೆ ರಾಜ್ಯ ಬಿಜೆಪಿ ಸರ್ಕಾರ ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾಯ್ದೆಯನ್ನು ಉಲ್ಲಂಘಿಸಿ 7,8885.32 ಕೋಟಿ ರೂ.ಗಳನ್ನು ನೀರಾವರಿ, ನಗರಾಭಿವೃದ್ದಿ ಗ್ರಾಮೀಣಾಭಿವೃದ್ದಿ ಯೋಜನೆಗಳಿಗೆ ವ್ಯಯ ಮಾಡಲಾಗಿದೆ. ಇದು ಸಂಪೂರ್ಣವಾಗಿ ಕಾನೂನು ವಿರೋಧಿ ಕೃತ್ಯವಾಗಿದ್ದು, ಇದಕ್ಕೆ ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Exit mobile version