DMKಗೆ ಶಾಕ್ ಕೊಟ್ಟ TVK: ವಿಜಯ್ (congress support for vijay government) ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ
ಸಂಪುಟದಲ್ಲಿ ಎರಡು ಸ್ಥಾನಕ್ಕಾಗಿ ‘ಕೈ’ ಒತ್ತಾಯ; ತಮಿಳುನಾಡಿನಲ್ಲಿ ಬದಲಾಗುತ್ತಿರುವ ರಾಜಕೀಯ ಲೆಕ್ಕಾಚಾರ
TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ
ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ (congress support for vijay government) ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆತ್ರಿ ಕಳಗಂ (TVK) ಸರ್ಕಾರ ರಚನೆಗೆ ಮತ್ತಷ್ಟು ಹತ್ತಿರವಾಗಿದೆ.
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ಟಿವಿಕೆ ಪಕ್ಷವೇ ಭರ್ಜರಿ ಪ್ರದರ್ಶನ ನೀಡಿ ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಿದ್ದು, ಈಗ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಬೆಳವಣಿಗೆ ತಮಿಳುನಾಡಿನ ಸಾಂಪ್ರದಾಯಿಕ ರಾಜಕೀಯ ಸಮೀಕರಣಗಳನ್ನೇ ಬದಲಾಯಿಸುವ ಸೂಚನೆ ನೀಡುತ್ತಿದೆ.

ಇನ್ನು 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು (congress support for vijay government) ಅಚ್ಚರಿ ಮೂಡಿಸಿದೆ. ಆದರೆ ಸರಳ ಬಹುಮತಕ್ಕೆ ಅಗತ್ಯವಿರುವ 118 ಸ್ಥಾನಗಳಿಗಿಂತ ಪಕ್ಷಕ್ಕೆ ಇನ್ನೂ 10 ಸ್ಥಾನಗಳ ಕೊರತೆಯಿದೆ.
ಇದೇ ಕಾರಣಕ್ಕೆ ಮೈತ್ರಿ ರಾಜಕಾರಣ ಅನಿವಾರ್ಯವಾಗಿದ್ದು, ಕಾಂಗ್ರೆಸ್ ಪಕ್ಷದೊಂದಿಗೆ ಮಾತುಕತೆಗಳು ವೇಗ ಪಡೆದುಕೊಂಡಿವೆ. ಕಾಂಗ್ರೆಸ್ ತನ್ನ ಬೆಂಬಲಕ್ಕೆ ಪ್ರತಿಯಾಗಿ ಸರ್ಕಾರದಲ್ಲಿ ಎರಡು ಪ್ರಮುಖ ಸಚಿವ ಸ್ಥಾನಗಳ ಬೇಡಿಕೆಯನ್ನು ಮುಂದಿಟ್ಟಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, ಎರಡೂ ಪಕ್ಷಗಳ ನಡುವೆ ಒಪ್ಪಂದದ ವಾತಾವರಣ ನಿರ್ಮಾಣವಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ.
ನಿನ್ನೆಯಷ್ಟೇ ಕಾಂಗ್ರೆಸ್ ನಾಯಕರು ಟಿವಿಕೆ ಪಕ್ಷವು ಸರ್ಕಾರ ರಚನೆಗಾಗಿ ತಮ್ಮ ಬೆಂಬಲವನ್ನು ಕೋರಿದೆ ಎಂದು ಬಹಿರಂಗಪಡಿಸಿದ್ದರು. ಇದರಿಂದ ಮೈತ್ರಿ ಸರ್ಕಾರದ
ಸಾಧ್ಯತೆಗಳು ಇನ್ನಷ್ಟು ಗಟ್ಟಿಯಾಗಿವೆ. ಕಾಂಗ್ರೆಸ್ ಬೆಂಬಲದೊಂದಿಗೆ ಟಿವಿಕೆ ಬಲ 113ಕ್ಕೆ ಏರಿಕೆಯಾದರೂ, ಇನ್ನೂ ಬಹುಮತ ಸಾಬೀತುಪಡಿಸಲು ಕೆಲವು ಶಾಸಕರ ಅಗತ್ಯವಿದೆ.
ಡಿಎಂಕೆ ಮೈತ್ರಿಕೂಟದಲ್ಲಿದ್ದ ಸಿಪಿಐ, ಸಿಪಿಎಂ ಮತ್ತು ವಿಸಿಕೆ ಪಕ್ಷಗಳ ಬೆಂಬಲವನ್ನೂ ಟಿವಿಕೆ ನಿರೀಕ್ಷಿಸುತ್ತಿದೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆಗಳಿಂದ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ.
ರಾಜಕೀಯ ಪ್ರವೇಶದ ನಂತರ ವಿಜಯ್ ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವುದು ವಿಶೇಷವೆನ್ನಲಾಗಿದೆ. ಜನಪ್ರಿಯ ನಟನಾಗಿ ಅಪಾರ ಅಭಿಮಾನಿ ಬಳಗ ಹೊಂದಿರುವ ವಿಜಯ್, ತಮ್ಮ ರಾಜಕೀಯ ಶಕ್ತಿಯನ್ನು ಈಗ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ.
ಕುಟುಂಬ ರಾಜಕೀಯ ಪ್ರಭಾವ ಹೊಂದಿರುವ ಪರಂಪರ ಪಕ್ಷಗಳ ನಡುವೆ ಹೊಸ ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿರುವ ಟಿವಿಕೆ, ಯುವ ಮತದಾರರಲ್ಲಿ ದೊಡ್ಡ ಮಟ್ಟದ ಬೆಂಬಲ ಗಳಿಸಿದೆ.
ಈ ಯಶಸ್ಸಿನ ಬಳಿಕ ವಿಜಯ್ ಅವರನ್ನು ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಮೇ 7ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳೂ ವ್ಯಕ್ತವಾಗಿವೆ.
ಇನ್ನೊಂದೆಡೆ ಕಾಂಗ್ರೆಸ್ ಹೈಕಮಾಂಡ್ ಈ ವಿಚಾರದಲ್ಲಿ ತುರ್ತು ನಿರ್ಧಾರ ಕೈಗೊಳ್ಳದೆ, ತಮಿಳುನಾಡು ಘಟಕದ ನಾಯಕರ ಅಭಿಪ್ರಾಯಕ್ಕೆ ಹೆಚ್ಚಿನ ಮಹತ್ವ ನೀಡಿದೆ.
ಸ್ಥಳೀಯ ರಾಜಕೀಯ ಪರಿಸ್ಥಿತಿ, ಮತದಾರರ ಮನೋಭಾವ ಮತ್ತು ಭವಿಷ್ಯದ ರಾಜಕೀಯ ಪರಿಣಾಮಗಳನ್ನು ಪರಿಗಣಿಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇದರ ನಡುವೆ ಕಾಂಗ್ರೆಸ್ ಒಳಗೆಯೂ ಬೆಂಬಲ ನೀಡಬೇಕೇ ಅಥವಾ ದೂರ ಉಳಿಯಬೇಕೇ ಎಂಬ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಕೆಲವರು ವಿಜಯ್ ಜೊತೆ ಕೈಜೋಡಿಸುವುದು ಭವಿಷ್ಯದ ರಾಜಕೀಯಕ್ಕೆ ಲಾಭಕರ ಎಂದು ಅಭಿಪ್ರಾಯಪಟ್ಟರೆ, ಇನ್ನು ಕೆಲವರು ಇದು ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿರುವ ವಿಜಯ್, ತಮ್ಮ ಬೆಂಬಲಿಗರು ಮತ್ತು ತಮಿಳುನಾಡಿನ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ಪಕ್ಷ ಆರಂಭಿಸಿದಾಗ ನಮ್ಮ ವಿರುದ್ಧ ಮಾತನಾಡಿದವರನ್ನೇ ಇಂದು ಜನರ ಬೆಂಬಲದ ಮೂಲಕ ಸೋಲಿಸಿದ್ದೇವೆ.
ಜನರನ್ನು ನಂಬಿ ಏಕಾಂಗಿಯಾಗಿ ನಿಂತು ಈ ಹಂತ ತಲುಪಿದ್ದೇವೆ” ಎಂದು ಅವರು ಹೇಳಿದ್ದಾರೆ. “ನಮ್ಮನ್ನು ತಾಯಿಯಂತೆ ಬೆಂಬಲಿಸಿದ ತಮಿಳುನಾಡಿನ ಜನರಿಗೆ ನಾನು ಜೀವಮಾನ ಪೂರ್ತಿ ಕೃತಜ್ಞ” ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.
ಈ ಜಯವು ಕೇವಲ ಪಕ್ಷದ ಗೆಲುವಲ್ಲ, ಪ್ರಜಾಪ್ರಭುತ್ವದ ಗೆಲುವು ಎಂದು ವಿಜಯ್ ಅಭಿಪ್ರಾಯಪಟ್ಟಿದ್ದು, ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆಗಳಿವೆ.
ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿರುವ ಸೂಚನೆಗಳು ಈಗ ಸ್ಪಷ್ಟವಾಗಿ ಕಾಣಿಸುತ್ತಿವೆ.