ಲೋಕಸಮರ ಗೆಲ್ಲಲು ಬಿಜೆಪಿ-ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದೆ ಕಾಂಗ್ರೆಸ್..!

2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ರಾಜ್ಯ ಕಾಂಗ್ರೆಸ್ (Congress targeting bjp jds) , ಇದೀಗ ಬಿಜೆಪಿ ಮತ್ತು ಜೆಡಿಎಸ್ನ

ಕೆಲ ನಾಯಕರಿಗೆ ಗಾಳ ಹಾಕಲುಮುಂದಾಗಿದೆ ಎಂದು ಸುದ್ದಿ (Congress targeting bjp jds) ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (D.K.Shivakumar) , ಬಿಜೆಪಿ ಮತ್ತು ಜೆಡಿಎಸ್ (JDS) ಪಕ್ಷದ ಅನೇಕ ನಾಯಕರು

ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ. ಆದರೆ ನಮ್ಮ ಪಕ್ಷದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಬಾರಿ 20 ಸ್ಥಾನ ಗೆಲ್ಲುವ ಗುರಿ ಹೊಂದಲಾಗಿದೆ.

ಪರಿಸ್ಥಿತಿಗೆ ಅನುಗುಣವಾಗಿ ಪಕ್ಷಕ್ಕೆ ಅನುಕೂಲವಾಗುವ ಯಾವುದೇ ರೀತಿಯ ತಿಳುವಳಿಕೆಯನ್ನು ಸ್ಥಳೀಯವಾಗಿ ಹೊಂದಲು ಕಾಂಗ್ರೆಸ್ನ ಸ್ಥಳೀಯ ನಾಯಕತ್ವಕ್ಕೆ ಚಾಲನೆ ನೀಡಲಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆ ಮೊದಲ ಆದ್ಯತೆಯಾಗಿದೆ. ನಾವು ನಮ್ಮ ಪಕ್ಷದ ಕಾರ್ಯಕರ್ತರಿಗೆ ಮತ ಹಂಚಿಕೆಯನ್ನು ಹೆಚ್ಚಿಸುವಂತೆ ಕೇಳಿದ್ದೇವೆ ಎಂದಿದ್ದಾರೆ.

ಸೌಜನ್ಯಗೆ ನ್ಯಾಯ ಕೊಡಿ: ‘ಸೌಜನ್ಯ ಕೇಸ್ ಮುಗಿದ ಅಧ್ಯಾಯ’ ಸಂಚಲನ ಸೃಷ್ಟಿಸಿದೆ ಗೃಹಸಚಿವ ಪರಮೇಶ್ವರ್ ಹೇಳಿಕೆ

ಇನ್ನು ಕೆಲವು ರಾಜ್ಯಗಳಲ್ಲಿ ಪಕ್ಷಕ್ಕೆ ಅಸ್ತಿತ್ವ ಇಲ್ಲದಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ನಾವು ಅಲ್ಲಿ ಪಕ್ಷವನ್ನು ಬಲಪಡಿಸಬೇಕಿದೆ. ಇನ್ನು ಕೆಲವು ಕಡೆ ದೊಡ್ಡ ನಾಯಕರು, ಪಕ್ಷಗಳು ನಮ್ಮೊಂದಿಗೆ

ಸೇರಲು ಮುಂದೆ ಬಂದಿವೆ, ಅಂತಹ ಪರಿಸ್ಥಿತಿಯಲ್ಲಿ ಪಕ್ಷದ ಹಿತದೃಷ್ಟಿಯಿಂದ ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಪ್ರತಿಪಕ್ಷದ ಕೆಲವು ನಾಯಕರು ಮತ್ತು ಹಾಲಿ ಶಾಸಕರು

ಲೋಕಸಭೆ ಚುನಾವಣೆಗೂ ಮುನ್ನ ಪಕ್ಷಕ್ಕೆ ಮರು ಸೇರ್ಪಡೆಯಾಗಲಿದ್ದಾರೆ. ಅಂತಿಮವಾಗಿ ಕೆಲವರನ್ನು ಸೇರ್ಪಡೆಗೊಳಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ

ಎಂದು ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್ (D.K.Shivakumar) ಪ್ರತಿಕ್ರಿಯಿಸಿದರು.

ಇನ್ನು ಬಿಜೆಪಿಯಲ್ಲಿ ತಮ್ಮನ್ನು ನಡೆಸಿಕೊಳ್ಳುತ್ತಿರುವ ರೀತಿಯಿಂದ ಯಾರಾದರು ಅಸಮಾಧಾನಗೊಂಡು ಕಾಂಗ್ರೆಸ್ಗೆ ಸೇರಲು ಮುಂದಾದರೆ ಪಕ್ಷದೊಳಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ಅವರು ಕಾಂಗ್ರೆಸ್, ಅದರ ಸಿದ್ಧಾಂತ ಮತ್ತು ನಾಯಕತ್ವದ ಮೇಲೆ ನಂಬಿಕೆ ಇಟ್ಟುಕೊಂಡು ಪಕ್ಷಕ್ಕಾಗಿ ಕೆಲಸ ಮಾಡಲು ಬಯಸಿದರೆ ತಪ್ಪೇನಿಲ್ಲ, ಬೇರೆ ಪಕ್ಷಗಳಿಗೆ ಹೋಗಿದ್ದ ಅನೇಕರು,

ಅರಿವಿನ ನಂತರ ಹಿಂತಿರುಗಿದ್ದಾರೆ ಎಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ (G.Parameshwar) ಹೇಳಿದರು.

ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಬಿಜೆಪಿ ಮತ್ತು ಜೆಡಿಎಸ್ (JDS) ಪಕ್ಷದ ಅನೇಕ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ. ರಾಜ್ಯ ಸರ್ಕಾರ ತನ್ನ ಸಾಮರ್ಥ್ಯವನ್ನು ಸಾಭೀತು ಮಾಡಬೇಕಾದರೆ,

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲೇಬೇಕಿದೆ. ಹೀಗಾಗಿ ಅನ್ಯ ಪಕ್ಷಗಳ ನಾಯಕರನ್ನ ಸೆಳೆಯುವ ತಂತ್ರಗಾರಿಕೆಗೆ ಕಾಂಗ್ರೆಸ್ ಮುಂದಾಗಿದೆ.

Exit mobile version