Politics : ಯಾವ ಮುಖ ಇಟ್ಟುಕೊಂಡು ಕಲ್ಯಾಣ ಕರ್ನಾಟಕಕ್ಕೆ ಕಾಲಿಟ್ಟಿದ್ದೀರಿ ಮುಖ್ಯಮಂತ್ರಿಗಳೇ? : ಕಾಂಗ್ರೆಸ್‌

CM

Bengaluru : ರಾಜ್ಯ(State) ಬಿಜೆಪಿ ಸರ್ಕಾರ(BJP Government) ಕಲ್ಯಾಣ ಕರ್ನಾಟಕವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಎಲ್ಲದರಲ್ಲೂ ಅನ್ಯಾಯ ಮಾಡಲಾಗುತ್ತಿದೆ. ಆದರೆ ಈಗ ಯಾವ ಮುಖ ಇಟ್ಟುಕೊಂಡು ಕಲ್ಯಾಣ ಕರ್ನಾಟಕಕ್ಕೆ ಕಾಲಿಟ್ಟಿದ್ದೀರಿ ಮುಖ್ಯಮಂತ್ರಿಗಳೇ? ಎಂದು ರಾಜ್ಯ ಕಾಂಗ್ರೆಸ್‌(State Congress) ಪ್ರಶ್ನಿಸಿದೆ.

ಈ ಕುರಿತು ಟ್ವೀಟ್‌(Tweet) ಮೂಲಕ ಕಿಡಿಕಾರಿರುವ ಕಾಂಗ್ರೆಸ್‌, ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ಬಗೆಯಲ್ಲೂ ಅನ್ಯಾಯ ಮಾಡಿದೆ ಬಿಜೆಪಿ ಸರ್ಕಾರ(BJP Government) ಎಂದು ಆ ಭಾಗದ ಸ್ವತಃ ಬಿಜೆಪಿ ಶಾಸಕರೇ ಆಕ್ರೋಶ ವ್ಯಕ್ತಪಡಿಸಿದ್ದರು. ಜನರ ಮಾತಲ್ಲ, ಕನಿಷ್ಠ ಅವರದೇ ಪಕ್ಷದ ಶಾಸಕರ ಮಾತನ್ನೂ ಬಿಜೆಪಿ ಸರ್ಕಾರ ಗಣನೆಗೆ ತೆಗೆದುಕೊಳ್ಳುತ್ತಿಲ್ಲ.

ಇದನ್ನೂ ಓದಿ : https://vijayatimes.com/state-bjp-counter-attack-dk-shivkumar/

ಯಾವ ಮುಖ ಇಟ್ಟುಕೊಂಡು ಕಾಲಿಟ್ಟಿದ್ದೀರಿ ಮುಖ್ಯಮಂತ್ರಿಗಳೇ? ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮಾತನಾಡಿದ್ದ ರಾಜ್ಯ ಬಿಜೆಪಿ ಸರ್ಕಾರ ಈಗ ಆ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಆರ್ಟಿಕಲ್ 371ಜೆ ಕೋಶವನ್ನು ಕಲಬುರ್ಗಿಗೆ ಸ್ಥಳಾಂತರವನ್ನೂ ಮಾಡಲಿಲ್ಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಇಷ್ಟು ದಿನ ನಿರ್ಲಕ್ಷಿಸಿ ಈಗ ಅಲ್ಲಿ ನಿಂತು ನಿಮ್ಮ ಯಾವ ಸಾಧನೆ ಹೇಳಿಕೊಳ್ಳುತ್ತೀರಿ? ಎಂದು ಪ್ರಶ್ನಿಸಿದೆ.

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರೇ, ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಆಚರಿಸಲು ತೆರಳಿದ್ದೀರಿ ಸಂತೋಷ. ಆ ಭಾಗಕ್ಕೆ ಹಿಂದುಳಿದ ಪ್ರದೇಶವೆಂಬ ಪಟ್ಟದಿಂದ ವಿಮೋಚನೆ ನೀಡುವ ಕೆಲಸಗಳನ್ನು ಮಾಡದಿರುವುದೇಕೆ? ಅನುದಾನದಲ್ಲಿ, ಉದ್ಯೋಗದಲ್ಲಿ ನಿರಂತರ ಅನ್ಯಾಯ ಎಸಗುತ್ತಿರುವುದು ಏಕೆ?

ಇದನ್ನೂ ಓದಿ : https://vijayatimes.com/health-tips-for-acidity/

ಆರ್ಟಿಕಲ್ 371ಜೆ(Article 371) ಮೀಸಲಾತಿಯಡಿ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ ಎಂದಿದ್ದ ಬಿಜೆಪಿ(BJP) ಮಾತು ಮರೆತಿದೆ. ಹುದ್ದೆಗಳನ್ನು ಮಾರಾಟ ಮಾಡುತ್ತಿರುವ ಬಿಜೆಪಿಗೆ ತಮ್ಮ ಮಾತು ನೆನಪಾಗುವುದಾದರೂ ಹೇಗೆ. ಭರ್ತಿಯಾಗುತ್ತಿರುವುದು ಹುದ್ದೆಗಳಲ್ಲ ಬಿಜೆಪಿಗರ ಜೇಬು ಮಾತ್ರ ಎಂದು ಟೀಕಿಸಿದೆ.

Exit mobile version