Karnataka : ಕಾಂಗ್ರೆಸ್‌ನ ರಾಜ್ಯ ಘಟಕವು ಜನವರಿ 8 ರಂದು ಚಿತ್ರದುರ್ಗದಲ್ಲಿ(Chitradurga) ಎಸ್ಸಿ/ಎಸ್ಟಿ ಸಮಾವೇಶವನ್ನು ನಡೆಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಸದ್ಯ ಬಿಜೆಪಿ ಪಕ್ಷದ ಸಮಾವೇಶಗಳು ನಡೆಯುತ್ತಿದ್ದು, ವಿಧಾನಸಭೆ(Congress to SC/ST convention) ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ತಿಂಗಳು ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಬೃಹತ್ ಎಸ್ಟಿ ರ್ಯಾಲಿ ಮತ್ತು ಸಾರ್ವಜನಿಕ ಸಭೆ ನಡೆಸಿತ್ತು. ಬಿಜೆಪಿ(Congress to SC/ST convention) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,(B.S Yediyurappa)
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಅಕ್ಟೋಬರ್ ನಲ್ಲಿ ಕಲಬುರಗಿಯ ಹಿಂದುಳಿದ ವರ್ಗಗಳ ಸಮಾವೇಶವನ್ನೂ ಬಿಜೆಪಿ ಪಕ್ಷ ನಡೆಸಿದೆ. ಹೀಗಾಗಿ ಬಿಜೆಪಿಯ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಎಸ್‌ಸಿ/ಎಸ್‌ಟಿ(SC/ST) ಸಮಾವೇಶ ನಡೆಸಲು ಕಾಂಗ್ರೆಸ್ ಮುಂದಾಗಿದೆ.
ಇದನ್ನೂ ಓದಿ : https://vijayatimes.com/pm-modis-influence-limited/
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್(G. Parameshwara) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳನ್ನು ದಾರಿ ತಪ್ಪಿಸುವ ಪ್ರಯತ್ನವನ್ನು ಕೆಲವು ಪಕ್ಷಗಳು ಮಾಡುತ್ತಿವೆ.
ಕಾಂಗ್ರೆಸ್(Congress) ತಮ್ಮೊಂದಿಗೆ ಇದೆ ಎಂದು ಜನರಿಗೆ ಭರವಸೆ ನೀಡಲು ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ 101 ಎಸ್ಸಿ ಮತ್ತು 52 ಎಸ್ಟಿ ಉಪ ಪಂಗಡಗಳಿವೆ.
ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ತರಲು ನಾವು ಬಯಸುತ್ತೇವೆ.
ಇದನ್ನೂ ನೋಡಿ : https://fb.watch/hjRbTXMq8_/ ಮೂಲಭೂತ ಸೌಕರ್ಯಗಳನ್ನು ಕಾಣದ ಗಂಗಾವತಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್.
ಅವರ ಸಮಸ್ಯೆಗಳು ಒಂದೇ ಆಗಿದ್ದು, ನಮ್ಮ ನಡುವೆ ಭಿನ್ನಾಭಿಪ್ರಾಯ ಇರಬಾರದು ಎಂಬ ಉದ್ದೇಶದಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಮಾವೇಶಕ್ಕೆ ಎಸ್ಸಿ ಮತ್ತು ಎಸ್ಟಿ ಸಮುದಾಯದ ಸುಮಾರು ಐದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ.

ಈ ಕಾರ್ಯಕ್ರಮಕ್ಕೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( Rahul Gandhi) ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕರೆತರಲು ರಾಜ್ಯ ಘಟಕವು ಯೋಜಿಸುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
- ಮಹೇಶ್.ಪಿ.ಎಚ್