ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು, ಡಿ. 15: ವಿಧಾನ ಪರಿಷತ್‌ನಲ್ಲಿ ಗಲಾಟೆ ನಡೆದ ಕಾರಣ ಸಭಾಪತಿ ಬಹುಮತ ಕಳೆದುಕೊಂಡಿದ್ದಾರೆ. ಹೀಗಾಗಿ ಅವರನ್ನು ಹಕ್ಕು ಚ್ಯುತಿಗೊಳಸುವ ಮೂಲಕ, ಅವಿಶ್ವಾಸಗೊಳಿಸಬೇಕು ಎಂಬುದಾಗಿ ಪರಿಷತ್ ಗಲಾಟೆಯ ನಂತರ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ಮಧ್ಯಪ್ರವೇಶಿಸುವಂತೆ ದೂರು ನೀಡಿದೆ.

ಈ ಕುರಿತಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಹಾಗೂ ಹೊರಟ್ಟಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಯೋಗವು ಕಾಂಗ್ರೆಸ್ ವಿರುದ್ಧ ದೂರು ನೀಡಲು ರಾಜಭವನಕ್ಕೆ ತೆರಳಿತ್ತು. ಬಿಜೆಪಿ, ಜೆಡಿಎಸ್ ನ ಎಂಎಲ್ಸಿಗಳು ರಾಜ್ಯಪಾಲರನ್ನು ಭೇಟಿ ಮಾಡಿ, ಕಾಂಗ್ರೆಸ್ ವರ್ತನೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ ಪರಿಷತ್ ಸದಸ್ಯರು ರಾಜ್ಯಪಾಲರಿಗೆ ನೀಡಿರುವಂತ ಮನವಿಯಲ್ಲಿ, ಸಭಾಪತಿಗಳು ಬಹುಮತ ಕಳೆದುಕೊಂಡಿದ್ದಾರೆ. ಅವರನ್ನು ಕೆಳಗಿಳಿಸುವ ಸಂಬಂಧ ತಾವು ಮಧ್ಯಪ್ರವೇಶಿಸಬೇಕು. ನಮಗೆ ನ್ಯಾಯಕೊಡಿಸುವಂತೆ ಮನವಿ ಮಾಡಿದ್ದಾರೆ.

Exit mobile version