karnataka : ಸಿದ್ದರಾಮಯ್ಯ(congress Vs bjp) ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ.
ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ರಾಜ್ಯ ಬಿಜೆಪಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿದೆ.
ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿರುವ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ(congress Vs bjp),
ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ.
ಸಿದ್ದರಾಮಯ್ಯ ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ. ಈಗ ಸಿದ್ದರಾಮಯ್ಯನವರು ಮತ್ತೆ ದಲಿತರಿಗೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು,
ದಲಿತರ ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ.
ಇದನ್ನೂ ಓದಿ : https://vijayatimes.com/2022-fifa-world-cup/
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ,
ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ,
ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ಎಂದು ಲೇವಡಿ ಮಾಡಿದೆ.
ಮಾನ್ಯ ಸಿದ್ದರಾಮಯ್ಯನವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ(Sadashiva) ಆಯೋಗದ ವರದಿ ಬಂದಿದೆ.
ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದೆ.
ಇದನ್ನೂ ನೋಡಿ : https://fb.watch/hmOLu7-sy5/ ಪೊಲೀಸರಿಗೆ ರೂಲ್ಸ್ ಇಲ್ವಾ?ಪ್ರಶ್ನಿಸಿದ್ರೆ ಜೀಪು ಹತ್ತಿಸ್ತಾರೆ. Police break rules!
ಇದ್ಕಕೂ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ.
ರಾಜ್ಯ ಬಿಜೆಪಿ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು,
ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.