Bangalore:ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ನ (Congress win women will win) ಸಿದ್ಧಾಂತ ಮತ್ತು ನಡವಳಿಕೆ ಸ್ಪಷ್ಟವಾಗಿ ಮಹಿಳಾ ವಿರೋಧಿಯಾದುದು.
ಗುಜರಾತ್ ನಿಂದ (Gujarat) ಮಣಿಪುರದ (Manipur) ವರೆಗೆ ಇದಕ್ಕೆ ಹಲವು ನಿದರ್ಶನಗಳನ್ನು ಕಾಣಬಹುದು. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜೊತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ.
ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ (BJP is anti-women) ಪಕ್ಷವಾಗಿರುತ್ತದೆ. ಇದರ ಮೂಲ ಮಂತ್ರ “ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ” (“Women do not deserve freedom”)
ಎಂಬುದಾಗಿದೆ ಎಂದು ಹೇಳಿದ್ದಾರೆ.ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ (JDS) ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು
ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ.ನಮ್ಮ ಸರ್ಕಾರ ”ಗೃಹಲಕ್ಷ್ಮಿ” ಮತ್ತು ”ಶಕ್ತಿ” ಯೋಜನೆಗಳನ್ನುGhrilakshmi'
'Shakti'' scheme)
ಶುರುಮಾಡಿದ ದಿನದಿಂದಲೂ ಬಿಜೆಪಿ ನಾಯಕರು ಇದರ (Congress win women will win) ವಿರುದ್ದ ಅಪಪ್ರಚಾರದ ಆಂದೋಲವನ್ನು ಪ್ರಾರಂಭಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗುತ್ತಿದೆ ಎಂದು ಕೆಲವರು ಆರೋಪಿಸಿದರೆ ಇನ್ನು ಕೆಲವರು ಇನ್ನೂ ಮುಂದಕ್ಕೆ ಹೋಗಿ ಈ ರೀತಿಯ ನೆರವು ನೀಡಿದರೆ ಹೆಣ್ಣುಮಕ್ಕಳು ಮನೆಬಿಟ್ಟು ಹಾದಿ
ತಪ್ಪುತ್ತಾರೆ ಎಂದು ತೀರಾ ಕ್ಷುಲ್ಲಕತನದ ಆರೋಪ ಮಾಡಿದ್ದಾರೆ.ಮಹಿಳಾ ಸಬಲೀಕರಣವನ್ನು ಕಾಂಗ್ರೆಸ್ ಪಕ್ಷ (Congress) ಎಂದೂ ರಾಜಕೀಯ ಕಾರ್ಯಕ್ರಮವಾಗಿ ನೋಡಿಲ್ಲ, ಅದು ನಮ್ಮ ಪಾಲಿಗೆ ಸಾಮಾಜಿಕ
ಜವಾಬ್ದಾರಿ. ಈ ಚುನಾವಣೆಯಲ್ಲಿ ನಿಮ್ಮ ಬೆಂಬಲದ ಬಲವನ್ನು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ನೀಡಿ ಗೆಲ್ಲಿಸಿ. ನಮ್ಮನ್ನು ಹರಸಿ, ಹಾರೈಸಬೇಕೆಂದು ಕೋರುತ್ತೇನೆ. ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿಯೇ ಮಹಿಳೆಯರ
ಗೆಲುವಿದೆ ಎಂದಿದ್ದಾರೆ.
ಇದನ್ನು ಓದಿ: ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿದ ಬ್ರೆಜಿಲ್:75ಕ್ಕೆ ಏರಿಕೆಯಾದ ಮೃತರ ಸಂಖ್ಯೆ.