download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ಈ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋಲಾರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕುರುಡುಮಲೆಯ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿ, ಯಾತ್ರೆ ನಿರ್ವಿಘ್ನವಾಗಿ ನಡೆಯುವಂತೆ ಬೇಡಿಕೊಂಡಿದ್ದಾರೆ. ದೇವಾಲಯದಲ್ಲಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1999 ರಲ್ಲಿ ಎಸ್.ಎಂ. ಕೃಷ್ಣಾ ಅವರು ಕುರುಡುಮಲೆಯಿಂದ ಪಾಂಚಜನ್ಯ ಯಾತ್ರೆ ಆರಂಭಿಸಿ, ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು.

ಬೆಂಗಳೂರು, ಮಾ. 02: ಕಾಂಗ್ರೆಸ್ ಪಕ್ಷವನ್ನು ಮತ್ತೆ  ಅಧಿಕಾರಕ್ಕೆ ತರಲು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾರ್ಚ್ 3ರಿಂದ ಜನಧ್ವನಿ ಯಾತ್ರೆ ಆರಂಭಿಸಲು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ನ ‘ಜನಧ್ವನಿ’ ಯಾತ್ರೆ ನಾಳೆಯಿಂದ ಆರಂಭಗೊಳ್ಳಲಿದೆ.

ಈ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋಲಾರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕುರುಡುಮಲೆಯ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿ, ಯಾತ್ರೆ ನಿರ್ವಿಘ್ನವಾಗಿ ನಡೆಯುವಂತೆ ಬೇಡಿಕೊಂಡಿದ್ದಾರೆ. ದೇವಾಲಯದಲ್ಲಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1999 ರಲ್ಲಿ ಎಸ್.ಎಂ. ಕೃಷ್ಣಾ ಅವರು ಕುರುಡುಮಲೆಯಿಂದ ಪಾಂಚಜನ್ಯ ಯಾತ್ರೆ ಆರಂಭಿಸಿ, ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಅದರಂತೆ ನಾನು ಕೂಡಾ ಪಾಂಚಜನ್ಯ ಮೊಳಗಿಸಲಿದ್ದೇನೆ. ಜನಧ್ವನಿ ಯಾತ್ರೆಯ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ, ಜನವಿರೋಧಿ ನೀತಿಗಳು, ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ಈ ಹೋರಾಟ ರೂಪಿಸಿದ್ದು, ಜನರ ಬಳಿಗೆ ಕಾಂಗ್ರೆಸ್ ಎಂಬ ಘೋಷವಾಕ್ಯದಡಿ ಜನಧ್ವನಿ ಯಾತ್ರೆ ನಡೆಸಲಾಗುವುದು. ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ಮುಖಂಡರುಗಳು ರಾಜ್ಯದಾದ್ಯಂತ ಬಸ್‌ನಲ್ಲಿ ಈ ಜನಧ್ವನಿ ಯಾತ್ರೆ ನಡೆಸುವರು ಎಂದು ತಿಳಿಸಿದ್ದಾರೆ.

ಇದೇ ಮಾರ್ಚ್ 3 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಈ ಯಾತ್ರೆ ಚಾಲನೆಯಾಗಲಿದ್ದು, ಬೆಂಗಳೂರಿನಿಂದ ಮಾರ್ಚ್ 3 ರಂದು ಕಾಂಗ್ರೆಸ್‌ನ ಎಲ್ಲ ಪ್ರಮುಖ ಮುಖಂಡರು ಬಸ್‌ನಲ್ಲಿ ದೇವನಹಳ್ಳಿಗೆ ತೆರಳಿ ಅಲ್ಲಿ ಪಾದಯಾತ್ರೆ ನಡೆಸಿ, ನಂತರ ಕಾಂಗ್ರೆಸ್ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವರು. ಇದಾದ ನಂತರ ಮಾರ್ಚ್ 3 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಜನಧ್ವನಿ ಯಾತ್ರೆ ನಡೆಯಲಿದೆ. ಈ ಜನಧ್ವನಿ ಯಾತ್ರೆ ನಿರಂತರವಾಗಿ ನಡೆಯದಿದ್ದರೂ ಎಲ್ಲಾ ಜಿಲ್ಲೆಗಳಲ್ಲೂ ನಾಯಕರುಗಳ ಸಮಯ ಲಭ್ಯತೆಯನ್ನು ನೋಡಿಕೊಂಡು ಜನಧ್ವನಿ ಯಾತ್ರೆ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article