Visit Channel

ಕೋವಿಡ್ ನಿಂದ ಮೃತರಾದ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ: ಎಚ್.ಡಿ. ಕುಮಾರಸ್ವಾಮಿ

file71mucxw0rsi16ky7f27c1544127646

ಬೆಂಗಳೂರು, ಮೇ. 24: ಕೋವಿಡ್ ನಿಂದ ಮೃತಪಟ್ಟ ಎಲ್ಲಾ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ ಎಂದಿದ್ದಾರೆ.

145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ.

ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ  ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ.

ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ  ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Latest News

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.