ರಾಜ್ಯದಲ್ಲಿ ಪಾಸಿಟಿವಿಟಿ ದರ ಇಳಿಕೆ

ಬೆಂಗಳೂರು ಸೆ 7 : ರಾಜ್ಯದಲ್ಲಿ ಮೊದಲ ಬಾರಿಗೆ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ ಶೇ 2%ಗಿಂತ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಕಳೆದ ಕೆಲವು ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಈ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್‌ ಹೆಚ್ಚಾಗಿತ್ತು. ಆದರೆ ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ರೇಟ್‌ ಕಡಿಮೆಯಾಗಿದ್ದು ಶೇ 2% ಗಿಂತ ಕಡಿಮೆಯಾಗಿದೆ ಎಂದು ಅವರು ತಿಳಿಸಿದರು.

ಶಾಲೆ ಆರಂಭಕ್ಕೂ ಸಿದ್ದತೆ : ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಈಗಾಗಲೇ 6ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯಲಾಗಿದ್ದು, ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ರೇಟ್‌ ಕಡಿಮೆಯಾಗಿದ್ದು, ಈ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಪ್ರಸ್ತುತವಿರುವ ಈ ಪ್ರಯೋಗ ಯಶಸ್ವಿಯಾದರೆ ಮುಂದಿನ ದಿನಗಲ್ಲಿ 1 ರಿಂದ 5 ನೇ ತರಗತಿವರೆಗಿನ ಶಾಲೆಗಳನ್ನು ತರೆಯಲು ಸರ್ಕಾರ ಸಿದ್ದತೆ ನಡೆಸಲಾಗಿದೆ.

Exit mobile version