ಜೂನ್ 7ರ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ಮುಂದುವರಿಕೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು, ಮೇ. 29: ರಾಜ್ಯದಲ್ಲಿ ಜೂನ್‌ 7ರವರೆಗೆ ಲಾಕ್‌ಡೌನ್‌ ಇರುತ್ತದೆ. ಆದರೆ, ಪರಿಸ್ಥಿತಿ ನೋಡಿಕೊಂಡು ಲಾಕ್‌ಡೌನ್‌ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಿದ್ದು, ರಾಜ್ಯದ ಜನತೆ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಪಿಎಂ ಕೇರ್ಸ್ ವೆಂಟಿಲೇಟರ್​ನಲ್ಲಿ ಕೆಲವೊಂದು ಸಮಸ್ಯೆಯಿದೆ. ಸಮಸ್ಯೆ ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದು ವಿಡಿಯೊ ಕಾನ್ಫರೆನ್ಸ್ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದರು.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಲಸಿಕೆ ಪೂರೈಕೆ ಬಗ್ಗೆ ಮಾತಾಡಿರುವೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಜೊತೆ ಮಾತನಾಡಿದ್ದೇವೆ. ಆದಷ್ಟು ಬೇಗ ಲಸಿಕೆ ಪೂರೈಕೆ ಮಾಡುವುದಾಗಿ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧ ಮಾರಾಟ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಅಲ್ಲೊಂದು ಇಲ್ಲೊಂದು ಮಾರಾಟ ಪ್ರಕರಣ ಕಂಡುಬರುತ್ತಿದೆ. ಕಾಳಸಂತೆಯಲ್ಲಿ ಔಷಧ ಮಾರುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಎಚ್ಚರಿಸಿದ್ದಾರೆ.

Exit mobile version