ಅಲೋಪತಿ ಚಿಕಿತ್ಸೆ ಬಗ್ಗೆ ವಿವಾದಾತ್ಮಕ ಹೇಳಿಕೆ: ತಮ್ಮ‌ ಹೇಳಿಕೆ ಹಿಂಪಡೆದ ಯೋಗಗುರು ಬಾಬಾ ರಾಮದೇವ್

ಹೊಸದಿಲ್ಲಿ, ಮೇ. 24: ʻಅಲೋಪತಿ ಸ್ಟುಪಿಡ್‌ʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್‌ದೇವ್‌ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

ರಾಮ್‌ದೇವ್‌ ಹೇಳಿಕೆಗೆ ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ, ಅವರ ವಿರುದ್ಧ ಮಕೈಗೊಳ್ಳುವಂತೆ ಕೇಂದ್ರಕ್ಕೆ ತಿಳಿಸಿತ್ತು. ಅಲೋಪತಿ ಕುರಿತ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಮ್‌ದೇವ್‌ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಆಗ್ರಹಿಸಿದ್ದರು.

ʻನಿಮ್ಮ ಹೇಳಿಕೆ ಕೊರೊನಾ ವಾರಿಯರ್‌ಗಳನ್ನು ಅಪಮಾನಿಸುತ್ತಿದೆ. ದೇಶದ ಜನರ ಭಾವನೆಗಳನ್ನು ಘಾಸಿಗೊಳಿಸುತ್ತಿದೆ. ಅಲೋಪತಿ ಕುರಿತ ನಿಮ್ಮ ಹೇಳಿಕೆಯು ಆರೋಗ್ಯ ಕಾರ್ಯಕರ್ತರ ಆತ್ಮಸ್ಥೈರ್ಯಕ್ಕೆ ಧಕ್ಕೆ ತರುತ್ತಿದೆ. ಕೋವಿಡ್‌ ವಿರುದ್ಧದ ನಮ್ಮ ಹೋರಾಟವನ್ನು ದುರ್ಬಲಗೊಳಿಸುತ್ತಿದೆ ಎಂದಿದ್ದರು.

ಆರೋಗ್ಯ ಸಚಿವರ ಪತ್ರಕ್ಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ರಾಮ್‌ದೇವ್‌, ‘ಗೌರವಾನ್ವಿತ ಸಚಿವರೇ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಅಲೋಪತಿ ವೈದ್ಯಕೀಯ ಪದ್ಧತಿ ಕುರಿತ ಹೇಳಿಕೆಯನ್ನು ಹಿಂಪಡೆದುಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

Exit mobile version