ಮತಾಂತರ ನಿಷೇಧ ಮಸೂದೆಗೆ ಸದನದಲ್ಲಿ ಅಂಗೀಕಾರ. ಮಸೂದೆ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ಬೆಳಗಾವಿ ಡಿ 23 : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತಾಂತರ ನಿಷೇಧ ಮಸೂದೆಯು ವಿಧಾನಸಭೆಲ್ಲಿ ಧ್ವನಿಮತದ ಮೂಲಕ ಅಂಗೀಕಾರವಾಗಿದೆ.

ನಿನ್ನೆ ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಿದ್ದರು. ಈ ಬಗ್ಗೆ ಇಂದು ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆಯಿತು. ಈ ಬಗ್ಗೆ ಮಾತನಾಡಿದ ಅರಗ ಜ್ಞಾನೇಂದ್ರ ಮತಾಂತರ ನಿಷೇಧ ವಿಧೇಯಕ ತಂದಿರುವುದು ಯಾವುದೇ ಧರ್ಮದ ವಿರುದ್ಧವಲ್ಲ ಅಥವಾ ಯಾವುದೇ ಧರ್ಮದ ಹಕ್ಕನ್ನು ಮೊಟಕುಗೊಳಿಸಲು ಅಲ್ಲ. ಈಗಾಗಲೇ ಎಂಟು ರಾಜ್ಯಗಳು ಈ ವಿಧೇಯಕ ತಂದಿವೆ. ಕರ್ನಾಟಕ ಒಂಭತ್ತನೇ ರಾಜ್ಯವಾಗಲಿದೆ. ಇತ್ತೀಚೆಗೆ ಮತಾಂತರ ದೊಡ್ಡ ಪಿಡುಗಾಗಿದ್ದು, ಇದೇ ಸದನದಲ್ಲಿ ಶಾಸಕರ ತಾಯಿಯೊಬ್ಬರು ಮತಾಂತರ ಆಗಿದ್ದನ್ನು ನೋಡಿದ್ದೇವೆ ಎಂದರು

ಬಲವಂತದ ಮತಾಂತರ ಮಾಡಿದರೆ ಮೂರರಿಂದ ಐದು ವರ್ಷ ಜೈಲು ಶಿಕ್ಷೆ, 25,000 ರೂ. ದಂಡ, ಅಪ್ರಾಪ್ತರು- ಅನೂಸೂಚಿತ ಜಾತಿ ಪಂಗಡಕ್ಕೆ ಸೇರಿದ ಪ್ರಕರಣವಾದರೆ 3 ರಿಂದ 10 ವರ್ಷ ಜುಲ್ಮಾನೆ, 50 ಸಾವಿರ ರೂ. ದಂಡ, ಸಾಮೂಹಿಕ ಮತಾಂತರ ಉಲ್ಲಂಘನೆ 3ರಿಂದ 10 ವರ್ಷ ಜುಲ್ಮಾನೆ 1 ಲಕ್ಷ‌ ರೂ. ದಂಡ, ಮತಾಂತರದಿಂದ ಬಲಿಯಾದರೆ ಆಪಾದಿತರಿಂದ 5 ಲಕ್ಷ ಮತ್ತು ನ್ಯಾಯಲಯದ ಶಿಕ್ಷೆಗೆ ಒಳಪಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

”ಬಲವಂತದ,‌ ಮತಾಂತರದ ಉದ್ದೇಶದಿಂದ ಮದುವೆಯಾದರೆ ಅದು ಅಸಿಂಧುವಾಗುತ್ತದೆ ಮತ್ತು ಜಾಮೀನು ರಹಿತ ಪ್ರಕರಣವಾಗಿರುತ್ತದೆ. ಮೂಲ ಮತದ ಎಲ್ಲ ಸೌಲಭ್ಯಗಳನ್ನು ವ್ಯಕ್ತಿ ಕಳೆದುಕೊಳ್ಳುತ್ತಾನೆ. ಮತಾಂತರದ ವ್ಯಕ್ತಿಯನ್ನು ಪುನರ್‌ವರ್ಗೀಕರಿಸಿ ದಾಖಲಾತಿಯಲ್ಲಿ ಬರೆಯಲಾಗುತ್ತದೆ. ಮತಾಂತರ ತಡೆಯುತ್ತಿಲ್ಲ. ಎಲ್ಲರನ್ನು ಒಪ್ಪಿಕೊಂಡು ಅಪ್ಪಿಕೊಂಡು ಬದುಕುತ್ತಿದ್ದೇವೆ. ಶ್ರೇಷ್ಠ ಸಂಸ್ಕೃತಿ ಒಡೆಯಬಾರದು,” ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು

 ಮದುವೆ ಅಸಿಂಧು: ಒಂದು ಧರ್ಮದ ಪುರುಷ ಮತ್ತೊಂದು ಧರ್ಮದ ಮಹಿಳೆಯೊಂದಿಗೆ ಮದುವೆಗೆ ಮುಂಚೆ ಅಥವಾ ನಂತರ ಆತನೆ, ಆಕೆಯೇ ಮತಾಂತರಗೊಳ್ಳುವ ಮೂಲಕ ಕಾನೂನು ಬಾಹಿರ ಮತಾಂತರ ಅಥವಾ ವಿಪರ್ಯಯದ ಏಕಮಾತ್ರ ಉದ್ದೇಶಕ್ಕಾಗಿ ಮಾಡಿದ ಮದುವೆ ಅಸಿಂಧು ಎಂದು ಘೋಷಿಸುವುದು.

ಉದ್ದೇಶ: ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಖಾತ್ರಿಗೊಳಿಸಲಾಗಿದೆ. ಯಾವುದೇ ವ್ಯಕ್ತಿ ತಮ್ಮ ಆಯ್ಕೆಯ ಯಾವುದೇ ಧರ್ಮವನ್ನು ಅಂಗೀಕರಿಸಲು, ಆಚರಿಸಲು ಮತ್ತು ಪ್ರಸಾರ ಮಾಡಲು ಮುಕ್ತ ರಾಜ್ಯದಲ್ಲಿ ಆಮಿಷ, ಒತ್ತಾಯ, ಬಲವಂತದ ಮತಾಂತರ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿವೆ. ಹೀಗಾಗಿ ಇಂತಹ ಘಟನೆಗಳನ್ನು ತಡೆಗಟ್ಟಲು ಮತ್ತು ಇಂತ ಕೃತ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಶಿಕ್ಷಿಸಲು ಅವಕಾಶ ಕಲ್ಪಿಸಲು ಈ ವಿಧೇಯಕವನ್ನು ತರಲಾಗಿದೆ ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

ಮಸೂದೆಯ ನಿಯಮಗಳು :

Exit mobile version