ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್‌ ತೀವ್ರ ವಿರೋಧ

ಬೆಂಗಳೂರು ಡಿ 11 : ಸೋಮವಾರದಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇ‍ಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿ, ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಈಗಾಗಲೇ ಜಾರಿಯಲ್ಲಿರುವ ಕಾಯ್ದೆಗೆ ದುರುದ್ದೇಶದಿಂದ ತಿದ್ದುಪಡಿ ತರಲು ಬಿಜೆಪಿ ಸರ್ಕಾರ ಮುಂದಾಗಿದೆ. ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ. ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ, ಬಿಜೆಪಿ ಸರ್ಕಾರರ ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು. ಹಾಗೆ ಮಾಡಿದರೆ ರಾಜ್ಯದ ಗೌರವಕ್ಕೆ ಕುಂದುಂಟಾಗುತ್ತದೆ ಮತ್ತು ಕಾನೂನು ಸುವ್ಯವಸ್ಥೆಯೂ ಹದಗೆಡುತ್ತದೆ ಎಂದು ತಿಳಿಸಿದ್ದಾರೆ.

Exit mobile version