ಕೊರೊನಾ ತಡೆಗೆ ಬಿಬಿಎಂಪಿಯಿಂದ ಮೆನೆ ಮನೆ ವೈದ್ಯರ ಭೇಟಿ

ಬೆಂಗಳೂರು, ಆ. 09: ಜುಲೈನಲ್ಲಿ ಕೊರೊನಾ ಹಾವಳಿ ಕೊಂಚ ಕಡಿಮೆಯಾಗಿದ್ದರೂ ಕೂಡ ಆಗಸ್ಟ್ ಮೊದಲ ವಾರದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಇನ್ನಷ್ಟು ಕಠಿಣ ಕ್ರಮಗಳನ್ನು ಹೆಚ್ಚಿಸಲು ಬಿಬಿಎಂಪಿ ಕ್ರಮ ಕೈಗೊಂಡಿದೆ ರಾಜ್ಯ ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಸಂಬಂಧ ಪ್ರತಿ ಮನೆಗೂ ವೈದ್ಯರು ಭೇಟಿ ನೀಡಿ ಪರಿಶೀಲಿಸಲು ಬಿಬಿಎಂಪಿ ತೀರ್ಮಾನಿಸಿದೆ.

ಈ ಸಂಬಂಧ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಆರ್. ಅಶೋಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮನೆ ಮನೆಗೂ ವೈದ್ಯರ ಭೇಟಿ ಕಡ್ಡಾಯ ಜೊತೆಗೆ ಒಂದು ಬಡಾವಣೆಯಲ್ಲಿ 3 ಕ್ಕಿಂತ ಹೆಚ್ಚು ಪ್ರಕರಣಗಳು ಬಂದರೆ ಇಡೀ ಬಡಾವಣೆಯ ಎಲ್ಲರನ್ನೂ ಕೂಡ ಪರೀಕ್ಷಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಗೌರವ ಗುಪ್ತಾ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಹಾಜರಿದ್ದರು.

Exit mobile version