ಬೆಂಗಳೂರು, ಮಾ. 28: ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳ, ಮೈದಾನ, ಮಾರುಕಟ್ಟೆ, ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆ, ಮೇಳಗಳನ್ನು ನಡೆಸುವುದಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರಆದೇಶ ಹೊರಡಿಸಿದೆ.
ಜನಸಾಮಾನ್ಯರ ಬದುಕಿನ ದಿಕ್ಕನ್ನೇ ಬದಲಿಸಿದ್ದ ಕೊರೊನಾ ಸೋಂಕಿನ ಆರ್ಭಟ ಮತ್ತೊಮ್ಮೆ ಹೆಚ್ಚಾಗುತ್ತಿದೆ. ಸೋಂಕು ಹರಡುವಿಕೆಯ ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರು, ಸೋಂಕಿತರ ಸಂಖ್ಯೆ ಮಾತ್ರ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳ ಮೇಲೂ ಸರ್ಕಾರ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಮುಂಬರುವ ಹಬ್ಬಗಳಾದ ಯುಗಾದಿ, ಹೋಳಿ, ಷಬ್ ಎ ಬರಾತ್, ಗುಡ್ ಫ್ರೈಡೆ ಸೇರಿದಂತೆ ಇತರೆ ಹಬ್ಬ, ಜಾತ್ರೆಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನಗಳು, ಮಾರುಕಟ್ಟೆಗಳು, ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕ ಸಭೆ-ಸಮಾರಂಭ ನಡೆಸದಂತೆ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.