ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಆತಂಕ: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು, ಆ. 06: ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಲಾ-ಕಾಲೇಜು ಆರಂಭ
ರಾಜ್ಯದಲ್ಲಿ ಎರಡು ಹಂತಗಳಲ್ಲಿ ಶಾಲಾಕಾಲೇಜುಗಳನ್ನ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಮೊದಲ ಹಂತದಲ್ಲಿ ಆಗಸ್ಟ್ 23 ರಿಂದ 9,10,11,12ನೇ ತರಗತಿಯನ್ನ ಆರಂಭಿಸಲಾಗುತ್ತದೆ. ಬ್ಯಾಚ್ ವೈಸ್ ತರಗತಿ ನಡೆಸಲಾಗುತ್ತದೆ. ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ತಜ್ಞರ ಸಮಿತಿ ಜತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಯಾವ ಜಿಲ್ಲೆಗಳು ಲಾಕ್ ಡೌನ್
ಸರ್ಕಾರದ ನಿರ್ಧಾರದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್ಡೌನ್ ನಿಯಮ ಜಾರಿಗೊಳಿಸಲಾಗಿದೆ. ಕೊರೊನಾ 3 ನೇ ಅಲೆ ಭೀತಿಗೆ ಸರ್ಕಾರದ ನಿರ್ಧಾರ ಕೇರಳ , ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದ್ದು, 2 ದಿನ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್ಡೌನ್ ಜಾರಿಗೊಳಿಸಿರುವ ಪರಿಣಾಮ ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ಎಲ್ಲವೂ ಬಂದ್ ಆಗಲಿದ್ದು, ಆಗಸ್ಟ್ ಬಳಿಕ ತೀವ್ರತೆ ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ.

ಸರ್ಕಾರದ ನಿರ್ಧಾರದಂತೆ ರಾಜ್ಯದ ಮೈಸೂರು, ಚಾಮರಾಜನಗರ, ಕೊಡಗು, ದ.ಕನ್ನಡ, ಬೆಳಗಾವಿ, ವಿಜಯಪುರ ಬೀದರ್ , ಕಲಬುರಗಿ ಜಿಲ್ಲೆಗಳಲ್ಲಿ ಸರ್ಕಾರದ ನಿಯಮ ಅನ್ವಯ ತಜ್ಞರ ಸಮಿತಿ ಶಿಪಾರಸು ಹಿನ್ನೆಲೆ ಸರ್ಕಾರ ಕ್ರಮಕೈಗೊಂಡಿದೆ.

Exit mobile version