ಬೆಂಗಳೂರು ಜ.11 : ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಬಿಜೆಪಿ ಮುಖಂಡರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಈ ಬಗ್ಗೆ ಸಿಎಂ ಟ್ವಿಟ್ ಮಾಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ. ಸಾಧಾರಣ ಲಕ್ಷಣ ಹೊಂದಿದ್ದು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಮನೆಯಲ್ಲಿ ಕ್ಯಾರಂಟೈನ್ ಆಗಿದ್ದೇನೆ ಎಂದಿದ್ದಾರೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯರಲ್ಲಿ ಪರೀಕ್ಷೆ ಮಾಡಿಕೊಳ್ಳಿ, ಜೊತೆಗೆ ಕ್ವಾರಂಟೈನ್ ಇರುವಂತೆ ಸಿಎಂ ಬೊಮ್ಮಾಯಿ ಸಲಹೆ ಮಾಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಯವರ ನಿಗದಿಯಾದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.
ಸಿಎಂಗೆ ಮಾತ್ರವಲ್ಲದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮೂರು ದಿನಗಳ ಹಿಂದಷ್ಟೇ ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಸೋಂಕು ದೃಢಪಟ್ಟಿದೆ.
ನಡ್ಡಾಗೂ ಕೊರೊನಾ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೂಡ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯ ಲಕ್ಷಣಗಳಿದ್ದ ಕಾರಣ ಪರೀಕ್ಷೆಗೆ ಒಳಗಾಗಿದ್ದು ಪಾಸಿಟಿವ್ ಆಗಿದ್ದೇನೆ. ಆದರೆ ಆರೋಗ್ಯವಾಗಿದ್ದು ಕಾರಂಟೈನ್ ಆಗುತ್ತಿದ್ದೇನೆ ಎಂದು ಟೀಟ್ ಮಾಡಿದ್ದಾರೆ.
ಇದೇ ವೇಳೆ, ರಕ್ತಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಆಗಿದ್ದು, ತಾವು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಅವರಿಗೂ ಸಾಮಾನ್ಯ ಲಕ್ಷಣಗಳಿದ್ದು, ಹೋಮ್ ಕ್ವಾರಂಟೈನ್ ಆಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.