ರಾಜಕಾರಣಿಗಳಿಗೂ ವಕ್ಕರಿಸುತ್ತಿರುವ ಕೊರೊನಾ

covid

ಬೆಂಗಳೂರು ಜ 11 : ರಾಜ್ಯದಲ್ಲಿ ಕೊರೊನಾ ಮತ್ತು ಒಮಿಕ್ರಾನ್‌ ಹೆಚ್ಚುತ್ತಿರುವ ಬೆನ್ನಲ್ಲೇ ರಾಜಕಾರಣಿಗಳಿಗೂ ಕೊರೊನಾ ವಕ್ಕರಿಸುತ್ತಿದ್ದು, ಈ ಬಾರಿ ಅನೇಕ ಮಂದಿ ಗಣ್ಯರು, ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಇಂದು ಅವರ ಸಂಪುಟದ ಮತ್ತೊಬ್ಬ ಹಿರಿಯ ಪ್ರಮುಖ ಸಚಿವ ಜೆ ಸಿ ಮಾಧುಸ್ವಾಮಿಗೆ ಸಹ ಕೊರೋನಾ ಪಾಸಿಟಿವ್ ಬಂದಿದ್ದು ಅವರು ಮತ್ತು ಅವರ ಪುತ್ರಿಗೆ ಪಾಸಿಟಿವ್ ಕಂಡುಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ.

ಈ ಹಿಂದೆ ರಾಜ್ಯ ಸಚಿವ ಸಂಪುಟದ ಸಚಿವರುಗಳಾದ ಆರ್ ಅಶೋಕ್ ಮತ್ತು ಬಿ ಸಿ ನಾಗೇಶ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಅವರು ಸದ್ಯಕ್ಕೆ ಗುಣಮುಖರಾಗುತ್ತಿದ್ದಾರೆ.  ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಮುಖ್ಯಮಂತ್ರಿಗಳೊಂದಿಗೆ ನೇರ ಸಂಪರ್ಕದಲ್ಲಿ ಸಚಿವರು, ಅಧಿಕಾರಿಗಳಿಗೆ ಕೊರೋನಾ ಆತಂಕ ಶುರುವಾಗಿದೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Exit mobile version