ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗೆ ಕೊರೋನಾ ದೃಢ

ದೆಹಲಿ, ಏ. 21: ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್ ನಿಶಾಂಕ್​​ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಮಗೆ ಸೋಂಕು ದೃಢಪಟ್ಟಿರುವ ವಿಚಾರವನ್ನು ಟ್ವೀಟ್ ಮೂಲಕ ತಿಳಿಸಿರುವ ರಮೇಶ್ ಪೋಖ್ರಿಯಾಲ್, ಕೊರೊನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್​ 19 ತಪಾಸಣೆಗೆ ಒಳಗಾಗಿ ಎಂದು ಹೇಳಿದ್ದಾರೆ. ಇನ್ನು ತಮ್ಮ ಇಲಾಖೆಗೆ ಸಂಬಂಧಪಟ್ಟ ಎಲ್ಲ ಕೆಲಸಗಳನ್ನು, ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ರಮೇಶ್ ಪೋಖ್ರಿಯಾಲ್ ಅವರು, ವಿವಿಧ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳೊಂದಿಗೆ ವರ್ಚ್ಯುವಲ್​ ಸಂವಾದ ನಡೆಸಿದ್ದಾರೆ. ಅಲ್ಲದೆ, ಇತ್ತೀಚೆಗಷ್ಟೇ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಗಳು, ಸಿಬಿಎಸ್​ಇ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಹ ಉನ್ನತ ಮಟ್ಟದ ಸಭೆ ನಡೆಸಿದ್ದರು. ಅದಾದ ಬಳಿಕ 10 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದಾಗಿತ್ತು, 12ನೇ ತರಗತಿ ಪರೀಕ್ಷೆ ಮುಂದೂಡಲ್ಪಟ್ಟಿತ್ತು.

Exit mobile version