ಕೊರೊನಾ‌ ಆತಂಕ ಹಿನ್ನೆಲೆ: ಮೇ 15ರವರೆಗೆ ಭಕ್ತರಿಗಿಲ್ಲ ನಂಜುಂಡೇಶ್ವರನ ದರ್ಶನ ಭಾಗ್ಯ

ಮೈಸೂರು, ಏ. 16: ಜಿಲ್ಲೆಯಾಧ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ನಂಜನಗೂಡು ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ.

ದಕ್ಷಿಣಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ನಂಜನಗೂಡಿಗೆ ರಾಜ್ಯ ಹಾಗೂ ವಿವಿಧ ಭಾಗಗಳ ಅಸಂಖ್ಯಾತ ಭಕ್ತರು ಪ್ರತಿನಿತ್ಯ ಆಗಮಿಸುತ್ತಾರೆ. ಆದರೆ ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು, ಪ್ರತಿದಿನ ನೂರಾರು ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಈ ಎಲ್ಲಾ ಕಾರಣದಿಂದ ಮುಂಜಾಗ್ರತೆ ಕ್ರಮವಾಗಿ ಏ.16ರಿಂದ ಅನ್ವಯವಾಗುವಂತೆ ಮೇ 15ರವರೆಗೆ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಈ ಸಂಬಂಧ ಕೇಂದ್ರೀಯ ಪುರಾತತ್ವ ಇಲಾಖೆ ಈ ಆದೇಶ ಹೊರಡಿಸಿದೆ. ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.

Exit mobile version