ದೇಶದಲ್ಲಿ ಮತ್ತೆ ಕೊರೊನಾ ಆತಂಕ: ಮಾಸ್ಕ್ ಕಡ್ಡಾಯಗೊಳಿಸಲು ಪ್ರಧಾನಿ ಸೂಚನೆ

ದೆಹಲಿ, ಮಾ. 17: ನಾವು ಕೊರೊನಾ ನಿಯಂತ್ರಣದಲ್ಲಿ ಸಾಧಿಸಿರುವ ಮುನ್ನಡೆಯನ್ನು ಬೇಜವಾಬ್ದಾರಿಯಾಗಿ ಬದಲಾಯಿಸುವುದು ಬೇಡ. ಮಾಸ್ಕ್ ಧರಿಸುವುದು ಮತ್ತು ಅಂತರ ಪಾಲಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ಆತ್ಮವಿಶ್ವಾಸವು ಅತಿಯಾಗಿ ಅದು ಅಪಾಯಕಾರಿ ಮಟ್ಟಕ್ಕೆ ಏರುವುದು ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದರು.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಂಗಳವಾರ ಸಂವಾದ ನಡೆಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೊನಾ ಮಾದರಿ ಪರೀಕ್ಷೆಗಳು ಹೆಚ್ಚಾಗಬೇಕು. ಕೆಲ ರಾಜ್ಯಗಳಲ್ಲಿ ದಿಢೀರನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಣ್ಣ ನಗರಗಳಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು ಎಂದು ಸೂಚಿಸಿದರು.

ಕೊರೊನಾ ನಿಯಂತ್ರಣಕ್ಕೆ ಅತಿಸೂಕ್ಷ್ಮ ವಲಯಗಳನ್ನು (ಮೈಕ್ರೊ ಕಂಟೇನ್ಮೆಂಟ್ ಜೋನ್) ಗುರುತಿಸಿಕೊಂಡು ಯೋಜನೆಗಳನ್ನು ರೂಪಿಸುವುದು ಅತ್ಯಗತ್ಯ. ದೇಶದಲ್ಲಿರುವ ಎಲ್ಲರೂ ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು. ಈ ವಿಚಾರದಲ್ಲಿ ಯಾರೊಬ್ಬರೂ ನಿರ್ಲಕ್ಷ್ಯ ಧೋರಣೆ ತೋರಬಾರದು. ಸ್ಥಳೀಯ ಆಡಳಿತಗಳು ಸಹ ಮಾಸ್ಕ್​ ಧಾರಣೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಟೆಸ್ಟ್, ಟ್ರೇಸ್, ಟ್ರ್ಯಾಕ್ ಮಂತ್ರದಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದರು.

ಕಳೆದ 70 ವಾರಗಳಲ್ಲಿ ದೇಶದ 70 ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ಶೇ 150ರಷ್ಟು ಹೆಚ್ಚಾಗಿದೆ. ಈಗ ನಾವು ಕೊರೊನಾ ಸೋಂಕು ವಿಸ್ತರಣೆಗೆ ಕಡಿವಾಣ ಹಾಕದಿದ್ದರೆ ರಾಷ್ಟ್ರವ್ಯಾಪಿ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಬಹುದು. ಭಾರತದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ 96ರಷ್ಟು ಇರುವುದು ಗಮನಾರ್ಹ ಸಂಗತಿ. ಸೋಂಕಿತರ ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಒಂದು ಎಂದು ಮೋದಿ ಹೇಳಿದರು.

ಭಾರತ ಸೇರಿ ವಿಶ್ವದ ಹಲವು ದೇಶಗಳು ಕೊರೊನಾದ ಹಲವು ಅಲೆಗಳನ್ನು ಎದುರಿಸಿವೆ. ದೇಶದಲ್ಲಿ ಕೊರೋನಾ 2ನೇ ಅಲೆ ವಿಸ್ತರಣೆಗೆ ಕಡಿವಾಣ ಹಾಕಬೇಕಿದೆ. ಇದಕ್ಕಾಗಿ ನಾವು ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಇಂಥ ಪ್ರದೇಶಗಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಗಮನ ನೀಡಬೇಕು. ಸಣ್ಣಸಣ್ಣ ನಗರಗಳಲ್ಲಿಯೂ ಕೊವಿಡ್ ಟೆಸ್ಟ್, ಲಸಿಕೆ ವಿತರಣೆ ಕೇಂದ್ರಗಳ ಸಂಖ್ಯೆ ಹೆಚ್ಚಾಗಬೇಕು. ದೇಶದಲ್ಲಿ ಪ್ರತಿದಿನ 30 ಲಕ್ಷ ಜನರಿಗೆ ಲಸಿಕೆ ನೀಡಬೇಕು. ಸಾಮೂಹಿಕ ಪ್ರಯತ್ನ, ಕಠಿಣ ಕ್ರಮಗಳಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ನುಡಿದರು.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.