ರಾಜ್ಯದಲ್ಲಿ ಕೊರೊನಾ ಆತಂಕ: ಅಧಿಕಾರಿಗಳೊಂದಿಗೆ ಸಿಎಂ ಸಭೆ: ಏ.20ರಂದು ಮಹತ್ವದ ತೀರ್ಮಾನ: ಯಡಿಯೂರಪ್ಪ

ಬೆಂಗಳೂರು, ಏ. 16: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ನಡೆಸಿ ಪ್ರಧಾನಿ ಮೋದಿ ಅವರ ಸಲಹೆ ಪಡೆದು ಏಪ್ರಿಲ್ 20ರಂದು ಮಹತ್ವದ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ವೈರಸ್ ಎರಡನೇ ಅಲೆ  ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲ ಸಿಎಂ ಯಡಿಯೂರಪ್ಪ ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. 

ಸಭೆ ಬಳಿಕ  ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ವೈ, ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 8 ನಗರಗಳಲ್ಲಿ ನೈಟ್ ಕರ್ಪ್ಯೂ ಮುಂದುವರೆಸುತ್ತೇವೆ. ಏಪ್ರಿಲ್ 18 ರಂದು ಸರ್ವಪಕ್ಷ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ, ಹಾಗೆಯೇ  ಪ್ರಧಾನಿ ನರೇಂದ್ರ ಮೋದಿ  ಅವರ ಜತೆ ಚರ್ಚಿಸಿ ಏಪ್ರಿಲ್ 20 ರ ಬಳಿಕ ಮುಂದಿನ ತೀರ್ಮಾನಿಸುತ್ತೇವೆ.ಉಳಿದಂತೆ ಯಾವುದೇ ತೀರ್ಮಾನ ಆಗಿಲ್ಲ ಎಂದು ಹೇಳಿದರು.

ಅಲ್ಲದೇ, ವಿಪಕ್ಷಗಳ ನಾಯಕರು ಸೇರಿದಂತೆ ಸರ್ವ ಪಕ್ಷ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿಯೂ ರಾಜ್ಯದಲ್ಲಿನ ಕೊರೋನಾ ನಿಯಂತ್ರಣಕ್ಕಾಗಿ ಕೈಗೊಳ್ಳ ಬಹುದಾದ ಕ್ರಮಗಳ ಕುರಿತಂತೆ ಸಲಹೆಯನ್ನು ಪಡೆಯಲಾಗುತ್ತದೆ. ಇದಾದ ಬಳಿಕ ಮಂಗಳವಾರ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು, ಅಲ್ಲಿಯೂ ಸರ್ವ ಪಕ್ಷ ಸಭೆಯಲ್ಲಿ ನಾಯಕರು ನೀಡಿದಂತ ಸಲಹೆ ಕುರಿತಂತೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.

Exit mobile version