ಹೈದರಾಬಾದ್, ಮೇ. 11: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ವಿಧಿಸಿರುವ ಬೆನ್ನಲ್ಲೇ ಇದೀಗ ತೆಲಂಗಾಣ ರಾಜ್ಯದಲ್ಲಿ ಮೇ 12ರಿಂದ 10 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದೆ.
ಕಳೆದ ವಾರ ತೆಲಂಗಾಣದಲ್ಲಿ ಲಾಕ್ಡೌನ್ ಹೇರುವುದನ್ನು ಸಿಎಂ ತಳ್ಳಿಹಾಕಿದ್ದ ಸಿಎಂ, ಲಾಕ್ ಡೌನ್ ನಿಯಮ ಜಾರಿಗೊಳಿಸಿದರೆ ರಾಜ್ಯದ ಆದಾಯದ ಮೇಲೆ ಪರಿಣಾಮ ಬೀರುವುದಲ್ಲದೆ ಹಲವಾರು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದ್ದರು. ಆದರೆ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಾರದ ಹಿನ್ನೆಲೆಯಲ್ಲಿ ಇದೀಗ 10 ದಿನಗಳ ಲಾಕ್ ಡೌನ್ ಜಾರಿಗೊಳಿಸಲು ತೆಲಂಗಾಣ ಸರ್ಕಾರ ಕ್ಯಾಬಿನೆಟ್ ನಿರ್ಧರಿಸಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿದಿನ ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ರಾಜ್ಯದ ಅವಶ್ಯಕತೆ ಪೂರೈಸಲು ಲಸಿಕೆ ಸಂಗ್ರಹಿಸಲು ಜಾಗತಿಕ ಟೆಂಡರ್ಗಳನ್ನು ಕರೆಯಲಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.