ಕೊರೊನಾ ಹಿನ್ನೆಲೆ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ

ಬೆಂಗಳೂರು,ಜೂ.18: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ರೇಕ್ ಬಿದ್ದಿದ್ದು, ಚುನಾವಣೆ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಠಿಯಿಂದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸುವುದು ಬಾಕಿ ಇದ್ದಲ್ಲಿ, ಈ ಚುನಾವಣೆಗಳನ್ನು ಕೂಡಲೇ ಮುಂದೂಡಬೇಕಿದೆ.

ಅಲ್ಲದೇ ಮಹಾನಗರಪಾಲಿಕೆ ಸೇರಿದಂತೆ ಇನ್ನಿತರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯನ್ನು ಸಹ 2021ರ ಏಪ್ರಿಲ್ 24ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಮುಂದೂಡಿ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

Exit mobile version