ಕೊರೊನಾ ಹಿನ್ನಲೆ; ಅಬುಧಾಬಿಯಲ್ಲಿ ದಿಢೀರ್ ಭಾಗಶಃ ಲಾಕ್ ಡೌನ್

ದುಬೈ, ಜು. 16: ಅಬುಧಾಬಿಯಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕದ ಹಿನ್ನೆಲೆಯಲ್ಲಿ ದಿಢೀರನೆ ಗುರುವಾರ ತಡರಾತ್ರಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ದೇಶದ ಉಳಿದ ಭಾಗಗಳು ಪ್ರವಾಸೋದ್ಯಮಕ್ಕೆ ಮುಕ್ತವಾಗಿದ್ದರೂ ಸಹ ಅಬುಧಾಬಿ ಮಾತ್ರ ಈ ನಿರ್ಧಾರಕ್ಕೆ ಬಂದಿದೆ.

ಸೋಮವಾರದಿಂದ ಲಾಕ್‌ಡೌನ್ ಪ್ರಾರಂಭವಾಗಲಿದ್ದು, ಪ್ರತಿದಿನ ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 5 ಗಂಟೆವರೆಗೆ ಇರುತ್ತದೆ ಎಂದು ಸರ್ಕಾರಿ ಸ್ವಾಮ್ಯದ ಡಬ್ಲ್ಯುಎಎಂ ಸುದ್ದಿ ಸಂಸ್ಥೆ ಹೇಳಿದೆ. ಸೋಮವಾರದಿಂದ ಯುಎಇಯಲ್ಲಿ ಯುಎಇ ಸುದೀರ್ಘ ಈದ್ ಅಲ್-ಅಧಾ ರಜಾದಿನಗಳು ಆರಂಭವಾಗುತ್ತಿವೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಬುಧಾಬಿ ಪ್ರವೇಶಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಲಾಕ್‌ಡೌನ್ ಘೋಷಿಸಲಾಗಿದೆ ಎನ್ನಲಾಗಿದೆ.

Exit mobile version