ಕೊರೊನಾ ಹಿನ್ನೆಲೆ: ಮತ್ತೆ ಕೆ-ಸೆಟ್ ಪರೀಕ್ಷೆ ಮುಂದೂಡಿದ ಮೈಸೂರು ವಿಶ್ವವಿದ್ಯಾನಿಲಯ

ಮೈಸೂರು, ಏ. 21: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯನ್ನು  ಮೈಸೂರು ವಿಶ್ವ ವಿದ್ಯಾಲಯ ಎರಡನೇ ಬಾರಿ ಮುಂದೂಡಿದೆ.

ಕೆ-ಸೆಟ್ ಪರೀಕ್ಷೆ ಏಪ್ರಿಲ್ 25 ರಂದು ನಿಗದಿಯಾಗಿತ್ತು. ಆದರೆ, ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಹಿಂದೆ ಏ.11 ರಂದು ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಪರೀಕ್ಷೆ ಮುಂದೂಡಲಾಗಿತ್ತು. ಆದರೆ, ಇದೀಗ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಕಾರಣದಿಂದ ಕೆ-ಸೆಟ್ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಕೆ-ಸೆಟ್ ಸಂಯೋಜನಾಧಿಕಾರಿ ಪ್ರೊ.ಎಚ್‍.ರಾಜಶೇಖರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Exit mobile version