ದಾವಣಗೆರೆಯಲ್ಲಿ ಕೊರೊನಾ ಸ್ಪೋಟ: ಕೇರಳ ಮೂಲದ 25 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ದಾವಣಗೆರೆ, ಏ. 07: ರಾಜ್ಯದಲ್ಲಿ ತಲ್ಲಣ ಮೂಡಿಸಿರುವ ಕೊರೊನಾ ಆರ್ಭಟ ಸ್ಪೋಟಗೊಂಡಿರುವ ಬೆನ್ನಲ್ಲೇ, ದಾವಣಗೆರೆಯಲ್ಲಿ 25 ನರ್ಸಿಂಗ್ ವಿದ್ಯಾರ್ಥಿಗಳು ಮಹಾಮಾರಿಗೆ ತುತ್ತಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ದಾವಣಗೆರೆಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೇರಳ ಮೂಲದ 25 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿನ 134 ವಿದ್ಯಾರ್ಥಿಗಳು ಹಾಗೂ 15 ಮಂದಿ ಅಡುಗೆ ಸಿಬ್ಬಂದಿ ಮತ್ತು ಕಾಲೇಜಿನ ಮೇಲ್ವಿಚಾರಕರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಜತೆಗೆ ವಿದ್ಯಾರ್ಥಿಗಳು ವಾಸವಾಗಿದ್ದ ವಿದ್ಯಾರ್ಥಿನಿಲಯವನ್ನು ಜೋ಼ನ್ ಎಂದು ಘೋಷಿಸಲಾಗಿದೆ.

ಮತ್ತೊಂದೆಡೆ ದಾವಣಗೆರೆಯಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಪಶ್ಚಿಮ ಬಂಗಾಳ ಮೂಲದ ಓರ್ವ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ, ಬಂಗಾಳ ಮೂಲದ ಎಲ್ಲಾ ನರ್ಸಿಂಗ್ ವಿದ್ಯಾರ್ಥಿಗಳಿಗೂ ಸಹ ಕೊರೊನಾ ಪರೀಕ್ಷೆ ನಡೆಸಲಾಗಿದೆ. ದಾವಣಗೆರೆಯ ಬಾತಿ ಬಳಿಯ ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಪರೀಕ್ಷೆ ನಡೆಸಲಾಗಿದ್ದು, ಪಶ್ಚಿಮ ಬಂಗಾಳದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು.

Exit mobile version