ದೇಶದಲ್ಲಿ ಒಂದೇ ದಿನ ಒಂದು ಲಕ್ಷ ಗಡಿ ದಾಟಿದ ಕೊರೋನಾ ಪ್ರಕರಣ

ಹೊಸದಿಲ್ಲಿ, ಏ. 05: ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಮಧ್ಯೆ ಒಂದೇ ದಿನ ದೇಶದಲ್ಲಿ ಕೊರೊನಾ ಪ್ರಕರಣ ಒಂದು ಲಕ್ಷ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 103,558 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಹಾಗೆಯೇ ಒಂದೇ ದಿನದಲ್ಲಿ ಕೊರೊನಾಗೆ 478  ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 1,65,101ಕ್ಕೆ ಏರಿಕೆಯಾಗಿದೆ.

ಸದ್ಯ 7 ಲಕ್ಷದ 41 ಸಾವಿರದ 830 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 52,847 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೂ ಒಟ್ಟಾರೆ 1,16,82,136 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Exit mobile version