ಕೊರೊನಾ ಪ್ರಕರಣ ಇಳಿಕೆ: ಮತ್ತೆ ಆರು ಜಿಲ್ಲೆಗಳು ಅನ್ ಲಾಕ್

ಬೆಂಗಳೂರು,ಜೂ.21: ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ 6 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಘೋಷಿಸಿದೆ.

ಕೊರೊನಾ ಆತಂಕ ಕ್ಷೀಣಿಸಿದ ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ರಾಜ್ಯದಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ನಿಯಮಗಳನ್ನು ರಾಜ್ಯ ಸರ್ಕಾರ ಹಂತ ಹಂತವಾಗಿ ಸಡಿಲಗೊಳಿಸುತ್ತಿದೆ. ಪರಿಣಾಮ ಇಂದಿನಿಂದ(ಸೋಮವಾರ) ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ನೀಡಿ,‌ ನಿರ್ದಿಷ್ಟ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಲಾಗಿದೆ.

ಇದರ ಜೊತೆಗೆ ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಿಸಲಾಗಿದ್ದು, ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಒಟ್ಟಾರೆ ಅನ್ ಲಾಕ್ ಗೊಂಡ ಜಿಲ್ಲೆಗಳ ಸಂಖ್ಯೆ 23ಕ್ಕೆ ಏರಿಕೆಯಾದಂತಾಗಿದೆ.

Exit mobile version