ತಿಮ್ಮಪ್ಪನ ಸನ್ನಿಧಿಗೂ ಕಾಲಿಟ್ಟ ಮಹಾಮಾರಿ ಕೊರೊನಾ

ತಿರುಮಲ: ದೇಶಾದ್ಯಂತ ತೀವ್ರವಾಗಿ ಜನರನ್ನು ಕಂಗೆಡಿಸಿರುವ ಕೋವಿಡ್-19 ಮಹಾಮಾರಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮತ್ತೊಂದೆಡೆ ಪುರಾಣ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನದ 15 ಮಂದಿ ಅರ್ಚಕರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ತಿಳಿಸಿದೆ.

ತಿರುಪತಿ ತಿರುಮಲ ದೇವಸ್ಥಾನದಲ್ಲಿರುವ 50 ಮಂದಿ ಅರ್ಚಕರಲ್ಲಿ 15 ಮಂದಿಗೆ ಕೋವಿಡ್ 19 ದೃಢಪಟ್ಟಿದ್ದು, 25 ಮಂದಿಯ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ. ಬೆಳವಣಿಗೆ ಹಿನ್ನೆಲೆಯಲ್ಲಿ ಟಿಟಿಡಿ(ತಿರುಮಲ ತಿರುಪತಿ ದೇವಸ್ಥಾನಂ) ತುರ್ತು ಸಭೆ ಕರೆದಿರುವುದಾಗಿ ವರದಿ ವಿವರಿಸಿದೆ. ಈವರೆಗೆ ತಿರುಮಲ ತಿರುಪತಿ ದೇವಸ್ಥಾನದ ಸುಮಾರು 91 ಮಂದಿ ಕಚೇರಿ ಸಿಬ್ಬಂದಿಗೆ ಕೋವಿಡ್ 19 ಇದ್ದಿರುವುದು ಪತ್ತೆಯಾಗಿದೆ. ಜು.10ರವರೆಗೆ ತಿರುಮಲದ 1865 ಉದ್ಯೋಗಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು ಎನ್ನಲಾಗಿದೆ.  ಜು.12ರಂದು ಟಿಟಿಡಿಯ ಎಕ್ಸಿಕ್ಯೂಟಿವ್ ಅಧಿಕಾರಿ ಅನಿಲ್ ಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ, ತಿರುಪತಿ ತಿರುಮಲ ದೇವಾಲಯದ 91 ಮಂದಿ ಉದ್ಯೋಗಿಗಳಿಗೆ ಕೋವಿಡ್ 19 ತಗುಲಿರುವುದನ್ನು ಭಕ್ತರಿಗೆ ಹಾಗೂ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

Latest News

ದೇಶ-ವಿದೇಶ

“ನಮ್ಮ ಮೆಸ್ ಊಟವನ್ನು ಪ್ರಾಣಿಗಳೂ ಸಹ ತಿನ್ನಲು ಸಾಧ್ಯವಿಲ್ಲ”; ಕಣ್ಣೀರಿಟ್ಟ ಪೇದೆ, ವೀಡಿಯೋ ವೈರಲ್

ಅಷ್ಟೇ ಅಲ್ಲದೇ ನನ್ನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ದಾರಿಹೋಕರ ಬಳಿ ಮನೋಜ್ ಕುಮಾರ್ ಅಳಲು ತೋಡಿಕೊಂಡಿದ್ದಾರೆ.

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.