ಕೊರೊನಾ ಇಳಿಮುಖ ಹಿನ್ನೆಲೆ: ಜು.19 ಹಾಗೂ 22ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾದ ಸರ್ಕಾರ

ಬೆಂಗಳೂರು,ಜೂ.29: ರಾಜ್ಯದಲ್ಲಿ  ಕೊರೊನಾ ಆಘಾತ ಕಡಿಮೆ ಆಗುತ್ತಿರುವ ಬೆನ್ನಲ್ಲೇ ಜುಲೈ 19 ಹಾಗೂ 22 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

‌ಜುಲೈ 19ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ನಡೆಯಲಿದೆ. ಬೆಳಗ್ಗೆ 10.30 ರಿಂದ 1.30 ಗಂಟೆ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 

ಈ ವರ್ಷ 8,76,581 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲಿದ್ದಾರೆ. ಕಳೆದ ಬಾರಿ 8 ಲಕ್ಷದ 46 ಸಾವಿರ ವಿದ್ಯಾರ್ಥಿಗಳಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆಗೆಂದೇ ಈ ವರ್ಷ 73,066 ಪರೀಕ್ಷಾ ಕೊಠಡಿ ಸಿದ್ಧಪಡಿಸಲಾಗುತ್ತಿದೆ. ಕಳೆದ ಬಾರಿಯಂತೆಯೇ ಈ ಬಾರಿ ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರವಾಗಿರಲಿವೆ.

ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಪರೀಕ್ಷಾ ತುರ್ತು ಸಿದ್ಧತೆಯನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೊನಾ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಸಾರ್ವಜನಿಕ ಅಂತರ ಕಾಪಾಡಿಕೊಳ್ಳಲು ಆರು ಆಡಿಗೆ ಒಂದರಂತೆ ಆಸನ ವ್ಯವಸ್ಥೆ ಮಾಡಲಾಗುತ್ತಿದ್ದು, ಕೊಠಡಿಯಲ್ಲಿ ಗಾಳಿ, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿ ಇರುವ ರೀತಿಯಲ್ಲಿ ನೋಡಿಕೊಳ್ಳಲು ಸೂಚಿಸಲಾಗಿದೆ. ಜತೆಗೆ ಸಿಸಿ ಟಿವಿ ಕ್ಯಾಮರಾ ಅಳವಡಿಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Exit mobile version