ಕೊರೊನಾ ಸಂಕಷ್ಟ: ನೌಕರರ 1 ತಿಂಗಳ ವೇತನ ಕಡಿತಗೊಳಿಸಿ ಆರೋಗ್ಯ ಕಾರ್ಯಕ್ಕೆ ಬಳಕೆಗೆ ಸರ್ಕಾರ ಚಿಂತನೆ

ಬೆಂಗಳೂರು, ಏ. 26: ರಾಜ್ಯದಲ್ಲಿ ಕೊರೊನಾ‌ ಸೋಂಕಿನ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಆರ್ಥಿಕ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಇದಕ್ಕಾಗಿ, ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತಗೊಳಿಸಿ ಅದನ್ನು ಆರೋಗ್ಯ ತುರ್ತು ಕಾರ್ಯಗಳಿಗೆ ಬಳಸಿಕೊಳ್ಳುವ ಬಗ್ಗೆ ಸಚಿವರ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.

ಸೋಮವಾರ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಪೊಲೀಸ್‌ ಮತ್ತು ಆರೋಗ್ಯ ಸಿಬ್ಬಂದಿ ಹೊರತುಪಡಿಸಿ ಉಳಿದಂತೆ ಎಲ್ಲ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತಗೊಳಿಸುವಂತೆ ಸಭೆಯಲ್ಲಿ ಮನವಿ ಮಾಡಲಾಗಿತ್ತು.

ಅಲ್ಲದೇ, ಶಾಸಕರು, ಪರಿಷತ್‌ ಸದಸ್ಯರು, ಸಚಿವರ ಒಂದು ತಿಂಗಳ ಸಂಬಳವನ್ನೂ ಕಡಿತಗೊಳಿಸಬಹುದು. ಇದರಿಂದ ಸರ್ಕಾರಕ್ಕೆ 5,000 ಕೋಟಿ ರೂ. ಉಳಿತಾಯ ಆಗಲಿದೆ ಎಂದು ಉಲ್ಲೇಖಿಸಲಾಗಿದೆ.

Exit mobile version