New Delhi : ದಿನೇ ದಿನೇ ಹೆಚ್ಚುತ್ತಿದೆ ಕೋರೋನಾ ಸೋಂಕಿತರ ಸಂಖ್ಯೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 5,300 ಕ್ಕೂ ಹೆಚ್ಚು ಹೊಸ ಕೋವಿಡ್ -19 (Covid-19) ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸುಮಾರು 1,000 ಕೋರೋನಾ (Corona increase again in India) ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಜಿಗಿತ ಕಂಡು ಬರುತ್ತಿದೆ.
ಇವತ್ತಿನ 5300 ಸೋಂಕಿತರೊಂದಿಗೆ ದೇಶದಲ್ಲಿರುವ ಸಕ್ರಿಯ ಕೋವಿಡ್ -19 ಪೀಡಿತರ ಸಂಖ್ಯೆ 25,587 ಕ್ಕೆ ಏರಿದೆ, ಇದು ಸುಮಾರು 2,400 ಪ್ರಕರಣಗಳ ಜಿಗಿತವಾಗಿದೆ.
ಸದ್ಯ ಸಕ್ರೀಯ ಪ್ರಕರಣಗಳ ಸಂಖ್ಯೆ 23,091ಕ್ಕೆ ಏರಿಕೆಯಾಗಿದ್ದು ಮಹಾರಾಷ್ಟ್ರದಲ್ಲಿ 4 (Maharashtra), ಕೇರಳದಲ್ಲಿ 4 ಹಾಗೂ ಕರ್ನಾಟಕ, ಪಾಂಡಿಚೇರಿ, ರಾಜಸ್ಥಾನ, ಹರಿಯಾಣ, ಗುಜರಾತ್, ಛತ್ತೀಸ್‌ಗಢ ಮತ್ತು ದೆಹಲಿಗಳಲ್ಲಿ ತಲಾ 1 ಸೇರಿ
ಒಟ್ಟು 15 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ (Central Health Department) ತಿಳಿಸಿದೆ.
ವಿದೇಶದಲ್ಲೂ ಗಣನೀಯವಾಗಿ ಕೋವಿಡ್ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೋವಿಡ್ ಹೆಚ್ಚಳದಿಂದ ಭಾರತದಲ್ಲಿ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಇತ್ತ ಭಾರತದಲ್ಲೂ ಕೊರೋನಾ ಮತ್ತೆ ಕಾಣಿಸಿಕೊಂಡಿದೆ. ಪ್ರತಿ ದಿನ ಸರಾಸರಿ 3,000 ಪ್ರಕರಣ ದಾಖಲಾಗುತ್ತಿವೆ.
ಇದನ್ನೂ ಓದಿ : https://vijayatimes.com/banana-stem-benifits/
ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ವಿದೇಶಿ ಪ್ರಯಾಣಿಕರು ಹಾಗೂ ವಿಮಾನ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ವಿಮಾನ ಪ್ರಯಾಣಿಕರು ಮಾಸ್ಕ್ ಧರಿಸುವಂತೆ (Corona increase again in India) ಸೂಚಿಸಲಾಗಿದೆ.
ಭಾರತದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೂ ಆತಂಕಪಡವು ಅಗತ್ಯವಿಲ್ಲ. ದೇಶದಲ್ಲಿನ ಕೋವಿಡ್ ಪ್ರಕರಣ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ನಿಗಾವಹಿಸಲಾಗಿದೆ.
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಉನ್ನತ ಮಟ್ಟದ ಸಭೆ ನಡೆಸಿ ಅಧಿಕಾರಿಗಳಿಗೆ ಮಹ್ವದ ಸೂಚನೆ ನೀಡಿದ್ದಾರೆ ಎಂದು ವಿಕೆ ಸಿಂಗ್ (VK Singh) ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ : https://vijayatimes.com/cattle-transportation-in-rajasthan/
ಕೋವಿಡ್ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರೂ ಸಹ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು. ಮಾಸ್ಕ್,
ಧರಿಸಿ ಅಂತರ ಕಾಪಾಡಿಕೊಳ್ಳಬೇಕು. ರೋಗ ಲಕ್ಷಣಗಳು ಕಂಡು ಬಂದ್ರೆ ವೈದ್ಯರನ್ನು ಭೇಟಿಯಾಗಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು.
- ರಂಜಿತಾ ಬಿ ಆರ್