ಮುಂಬೈ, ಎ. 02: ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಅಬ್ಬರ ಸದ್ಯಕ್ಕೆ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ದೇಶಾದ್ಯಂತ ಆತಂಕ ಸೃಷ್ಟಿಸಿರುವ ಮಹಾಮಾರಿಗೆ ಈಗಾಗಲೇ ಹಲವು ರಾಜಕೀಯ ನಾಯಕರು, ಸೆಲೆಬ್ರಿಟಿಗಳಿಗೂ ತುತ್ತಾಗಿದ್ದು, ಇದೀಗ ಇವರ ಸಾಲಿಗೆ ಬಾಲಿವುಡ್ ಬೆಡಗಿ ನಟಿ ಆಲಿಯಾ ಭಟ್ ಕೂಡ ಸೇರಿಕೊಂಡಿದ್ದಾರೆ.

ನಟಿ ಆಲಿಯಾ ಭಟ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಸ್ವತಃ ಆಲಿಯಾ ಭಟ್ ಅವರೇ ಹೇಳಿಕೊಂಡಿದ್ದು, ಹೋಂ ಕ್ವಾರಂಟೈನ್ ಗೆ ಒಳಪಟ್ಟಿರುವುದಾಗಿ ಹಾಗೂ ವೈದ್ಯರ ಸಲಹೆಯಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಆಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಮುಂಬೈ ಮಾಫಿಯಾ ಕ್ವೀನ್ ಗಂಗೂಬಾಯಿ ಕಾಠಿಯಾವಾಡಿ ಜೀವನ ಚರಿತ್ರೆ ಆಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.