ಬೆಂಗಳೂರು ಆ 25 : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯನ್ನು ಬರುವ ಸಂಭವವಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕ್ರಮ ಕೈಗೊಳ್ಳಲಾಗುವುದಾಗಿ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ
ರಾಜ್ಯದ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಕೊರೋನಾ ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ 18 ವರ್ಷದೊಳಗಿನ ಮಕ್ಕಳಿಗೆ ಸಂಬಂಧಿಸಿದಂತೆ ಒಟ್ಟು ಪರೀಕ್ಷೆಯ 10% ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಗ್ರಾಮೀಣ ಭಾಗಗಳಲ್ಲಿ ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಕೊರೋನಾ ಪರೀಕ್ಷಾ ಪ್ರಮಾಣದ 50% ಪರೀಕ್ಷೆಗಳನ್ನು ತಾಲೂಕು ಕೇಂದ್ರದ ಹೊರಗೆ ನಡೆಸುವಂತೆ ಸೂಚಿಸಲಾಗಿದೆ. ಹಾಗೆಯೇ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಹೊಂದಿರುವ ಗ್ರಾಮ ಪಂಚಾಯತ್, ಪಟ್ಟಣ ಪ್ರದೇಶಗಳಲ್ಲಿ ರೋಗಲಕ್ಷಣರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ