ಬೆಂಗಳೂರು, ಏ. 14: ದೇಶದಾದ್ಯಂತ ಮಹಾಮಾರಿ ಕೊರೊನಾ ಆರ್ಭಟ ಉಲ್ಬಣಗೊಂಡಿದೆ. ಈಗಾಗಲೇ ಹಲವು ಸೆಲೆಬ್ರಿಟಿಗಳ ಹೆಗಲೇರಿರುವ ಕೊರೊನಾ ಸೋಂಕು, ಇದೀಗ ಉತ್ತರ ಪ್ರದೇಶದ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮ್ಮ ಕಚೇರಿಯ ಕೆಲವು ಅಧಿಕಾರಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರಲ್ಲಿ ಕೆಲವರು ನನ್ನ ಸಂಪರ್ಕಕ್ಕೆ ಬಂದಿದ್ದರು. ಹೀಗಾಗಿ, ಮುಂಜಾಗ್ರತೆ ಕ್ರಮವಾಗಿ ನಾನು ಸ್ವಯಂ ಐಸೊಲೇಷನ್ ಆಗಿದ್ದೇನೆʼ ಎಂದು ತಿಳಿಸಿದ್ದಾರೆ.
शुरुआती लक्षण दिखने पर मैंने कोविड की जांच कराई और मेरी रिपोर्ट पॉजिटिव आई है।
— Yogi Adityanath (@myogiadityanath) April 14, 2021
मैं सेल्फ आइसोलेशन में हूं और चिकित्सकों के परामर्श का पूर्णतः पालन कर रहा हूं। सभी कार्य वर्चुअली संपादित कर रहा हूं।
ಮತ್ತೊಂದೆಡೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ʻನನಗೆ ಕೋವಿಡ್ ಸೋಂಕು ತಗುಲಿದ್ದು, ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿʼ ಎಂದು ತಿಳಿಸಿದ್ದಾರೆ.
अभी-अभी मेरी कोरोना टेस्ट की रिपोर्ट पॉज़िटिव आई है। मैंने अपने आपको सबसे अलग कर लिया है व घर पर ही उपचार शुरू हो गया है।
— Akhilesh Yadav (@yadavakhilesh) April 14, 2021
पिछले कुछ दिनों में जो लोग मेरे संपर्क में आये हैं, उन सबसे विनम्र आग्रह है कि वो भी जाँच करा लें। उन सभी से कुछ दिनों तक आइसोलेशन में रहने की विनती भी है।