ನವದೆಹಲಿ ಆ 27 : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಒಟ್ಟು 44,658 ಪ್ರಕರಣಗಳಲ್ಲಿ ಕೋವಿಡ್ ದೃಢಪಟ್ಟಿದ್ದು, ಕೇರಳದಿಂದಲೇ 30,007 ಹೊಸ ಪ್ರಕರಣಗಳು ವರದಿಯಾಗಿವೆ.ಇದೇ ಅವಧಿಯಲ್ಲಿ 32,988 ಮಂದಿ ಗುಣಮುಖರಾಗಿದ್ದಾರೆ ಹಾಗೂ 496 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.
ಈ ಮೂಲಕ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3.26 ಕೋಟಿ ದಾಟಿದೆ. ಈಪೈಕಿ 3.18 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ, ಚೇತರಿಕೆ ಪ್ರಮಾಣ ಶೇ 97.60ರಷ್ಟಿದೆ. ಹಾಗೂ ಕೋವಿಡ್ ಕಾರಣಗಳಿಂದಾಗಿ 4,36,861 ಜನ ಸಾವಿಗೀಡಾಗಿದ್ದಾರೆ. ಪ್ರಸ್ತುತ 3,44,899 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.
ಇದುವರೆಗೂ ದೇಶದಾದ್ಯಂತ 61.22 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಲಾಗಿದೆ.