ಕೊರೊನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಇಂದು ಮೋದಿ ಚರ್ಚೆ

ಹೊಸದಿಲ್ಲಿ, ನ. 30: ಇತ್ತೀಚಿಗಷ್ಟೇ ದೇಶದಲ್ಲಿ ಕೊರೊನಾ ಲಸಿಕೆ ಅಭಿವೃದ್ಧಿಯ ಪ್ರಗತಿ ಪರಿಶೀಲನೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ತೊಡಗಿರುವ ಮೂರು ತಂಡಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಲಿದ್ದಾರೆ ಎಂದು ತಿಳಿಸಿದೆ. ಹಾಗೆಯೇ ಅವರು ಸಂವಹನ ನಡೆಸುವ ತಂಡಗಳು ಜೆನ್ನೋವಾ ಬಯೋಫಾರ್ಮಾ, ಬಯೋಲಾಜಿಕಲ್ ಇ ಮತ್ತು ಡಾ. ರೆಡ್ಡಿ ತಂಡದೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಟ್ಟೀಟ್‌ ಮೂಲಕ ಮಾಹಿತಿ ನೀಡಿದೆ.

Exit mobile version