ಕೊರೊನಾ ಮಾಹಾಮಾರಿಗೆ ಖಾಸಗಿ ಸುದ್ದಿವಾಹಿನಿ ಕ್ಯಾಮೆರಾಮನ್ ಬಲಿ

ಚಿತ್ರದುರ್ಗ, ಮೇ. 12: ಜಿಲ್ಲೆಯ ಪಬ್ಲಿಕ್‌ ಟಿವಿ ಕ್ಯಾಮೆರಾಮನ್ ಆಗಿ ಕಳೆದ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ್ ಕೋಟಿ(35) ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 7-30 ರ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಪಬ್ಲಿಕ್‌ ಟಿವಿ ಕ್ಯಾಮೆರಾ ಮೇನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ್ ಕೋ,ಟಿ ಸೌಮ್ಯ ಸ್ವಭಾವದ, ಸೌಜನ್ಯ ವ್ಯಕ್ತಿತ್ವ ರೂಪಿಸಿಕೊಂಡಿದ್ದರು. ಕಳೆದ ಬಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ವೇಳೆಯೂ ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಸವರಾಜ್, ನಂತರ ಚೇತರಿಸಿಕೊಂಡಿದ್ದರು.

ಹಲವು ವರ್ಷಗಳಿಂದಲೂ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ್ ಕೋಟಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಛಾಯಾಗ್ರಾಹಕ ಬಸವರಾಜ್ ಕೋಟಿ ನಿಧನಕ್ಕೆ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ಸೂಚಿಸಿದೆ ಎಂದು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್. ಲಕ್ಷ್ಮಣ್ ಹಾಗೂ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Exit mobile version