ಬೆಂಗಳೂರು, ಜ. 01: ಕೊರೊನಾ ಆತಂಕದ ನಡುವೆಯೇ ರಾಜ್ಯದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನರಾರಂಭವಾಗುತ್ತಿರುವ, ಹಿನ್ನೆಲೆಯಲ್ಲಿ ಕೊರೊನಾ ಮಾರ್ಗಸೂಚಿ ಹಾಗೂ ಸ್ವಚ್ಛತೆ ಪಾಲಿಸುವ ಮೂಲಕ ಸರ್ಕಾರದೊಂದಿಗೆ ಸಹಕರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿರುವ ಅವರು, ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಇಂದಿನಿಂದ 10 ಮತ್ತು 12ನೇ ತರಗತಿಗಳು ನಡೆಯಲಿದ್ದು, 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಪುನರಾರಂಭಗೊಳ್ಳಲಿದೆ. ಮಕ್ಕಳ ಸುರಕ್ಷತೆಗೆ ಎಲ್ಲ ಸಿದ್ಧತೆ ನಡೆಸಿದ್ದು, ಕಡ್ಡಾಯ ಮಾಸ್ಕ್ ಧರಿಸಿ, ಭೌತಿಕ ಅಂತರ, ಸ್ವಚ್ಛತೆ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ.