ಅಂತರಾಷ್ಟ್ರೀಯ ವಿಮಾನ ಹಾರಟಕ್ಕೆ ಬ್ರೇಕ್ ಹಾಕಿ – ಅರವಿಂದ್ ಕೇಜ್ರಿವಾಲ್

ನವದೆಹಲಿ ನ 27 : ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ, ದಕ್ಷಿಣ ಆಫ್ರಿಕಾ ಸೇರಿದಂತೆ ನಾಲ್ಕು ದೇಶಗಳಲ್ಲಿ ಕಾಣಿಸಿಕೊಂಡಿರುವ ಹೊಸ ತಳಿಯ ಒಮಿಕ್ರಾನ್ ಸೋಂಕು ಭಾರತದಲ್ಲೂ ತಲ್ಲಣ ಮೂಡಿಸಿದೆ. ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಲ್ಲಿ ವಿದೇಶಿಗಳಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರಿ ಭಾರತದಲ್ಲಿ ಮೂರನೇ ಅಲೆಯ ಭೀತಿಯ ಹೆಚ್ಚಿಸಿದೆ.  ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಉನ್ನತ ಅಧಿಕಾರಿಗಳ ಸಭೆ ನಡೆಸಿದರು.

ಅದಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರುವಂತೆ ಮನವಿ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಕಾಣಿಸಿಕೊಂಡ ದೇಶಗಳಿರುವ ವಿಮಾನ ಹಾರಾಟವನ್ನು ನಿಷೇಧಿಸಬೇಕು ಎಂದು ಕೇಳಿಕೊಂಡಿದ್ದಾರೆ. ಕಷ್ಟಪಟ್ಟು ನಮ್ಮ ದೇಶ ಕೊರೊನಾದಿಂದ ಚೇತರಿಸಿಕೊಂಡಿದೆ. ಈ ಹೊಸ ರೂಪಾಂತರವು ಭಾರತಕ್ಕೆ ಪ್ರವೇಶಿಸುವುದನ್ನು ತಡೆಯಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

Exit mobile version