ಕೊರೊನಾ ಆರ್ಭಟ; ನೆರೆಯ ಶ್ರೀಲಂಕಾದಲ್ಲಿ 10 ದಿನಗಳ ಕಾಲ ಲಾಕ್ ಡೌನ್

ಕೊಲಂಬೊ, ಆ. 21: ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ನೆರೆಯ ಶ್ರೀಲಂಕಾದಲ್ಲಿ ನಿನ್ನೆ ರಾತ್ರಿಯಿಂದ 10 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ.

ಆಗಸ್ಟ್ 30ರ ರಾತ್ರಿ 10 ಗಂಟೆವರೆಗೆ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಎಲ್ಲಾ ಅಗತ್ಯ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಅನೇಕ ನಿರ್ಬಂಧಗಳು ಈಗಾಗಲೇ ಜಾರಿಯಲ್ಲಿದ್ದು, ಶಾಲೆಗಳು, ಜಿಮ್‌ಗಳು ಮತ್ತು ಈಜುಕೊಳಗಳನ್ನು ಮುಚ್ಚಲಾಗಿದೆ. ಮದುವೆ ಮತ್ತು ಸಂಗೀತ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಸೋಮವಾರದಿಂದಲೇ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿದಿನ ರಾತ್ರಿ 10 ರಿಂದ ಬೆಳಗಿನ ಜಾವ 4 ರವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಶ್ರೀಲಂಕಾದಲ್ಲಿ ಬುಧವಾರ ಏಕದಿನದಲ್ಲಿ ಅತಿ ಹೆಚ್ಚು 187 ಸಾವು ಮತ್ತು 3,793 ಪ್ರಕರಣಗಳು ದೃಢಪಟ್ಟಿವೆ.

Exit mobile version