ಹೊಸದಿಲ್ಲಿ, ಏ. 06: ದೇಶಾಧ್ಯಂತ ತಲ್ಲಣ ಮೂಡಿಸಿರುವ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವು ಸೆಲೆಬ್ರಿಟಿಗಳು ಎರಡನೇ ಅಲೆಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇವರ ಸಾಲಿಗೆ ಇದೀಗ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಸಹ ಸೇರ್ಪಡೆಗೊಂಡಿದ್ದಾರೆ.
ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಕತ್ರಿನಾ ಕೈಫ್, ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕತ್ರಿನಾ, ತಮ್ಮಗೆ ಕೊರೊನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೇ, ವೈದ್ಯರ ಸಲಹೆಯಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿರುವುದಾಗಿ ಸಹ ತಿಳಿಸಿದ್ದಾರೆ.
ಅಲ್ಲದೇ, ತಮಗೆ ಕೊರೊನಾ ಪಾಸಿಟಿವ್ ಬಂದಿರುವ ಕಾರಣ ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಜತೆಗೆ ಪ್ರೀತಿ ಹಾಗೂ ಬೆಂಬಲ ತೋರಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.