ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್

ಬೆಂಗಳೂರು, ಏ. 17:: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ತಮಗೆ ಕೊರೋನಾ ಸೋಂಕು ತಗುಲಿರುವುದನ್ನ ದೃಢಪಡಿಸಿದ್ದಾರೆ. ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕಳೆದ ಕೆಲವು ‌ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಈ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹ ಹೋಂ ಕ್ವಾರಂಟೈನ್ ಆಗಿದ್ದರು.

Exit mobile version