ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ಪಾಸಿಟಿವ್

ಇಸ್ಲಾಮಾಬಾದ್, ಮಾ. 20: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೊರೊನಾಕ್ಕೆ ತುತ್ತಾಗಿದ್ದು, ಈ ಕುರಿತು ಪಾಕಿಸ್ತಾನ ಆರೋಗ್ಯ ಸಚಿವ ಫೈಸಲ್ ಸುಲ್ತಾನ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಆರೋಗ್ಯ ಸಚಿವರು, ಇಮ್ರಾನ್ ಖಾನ್ ಎರಡು ದಿನಗಳಿಂದ ಕ್ವಾರಂಟೈನ್​ನಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಚೀನಾದ ಕೊರೊನಾ ಲಸಿಕೆ ಸಿನೋಫಾರ್ಮ್​ನ್ನು ಇಮ್ರಾನ್ ಖಾನ್ ಚುಚ್ಚಿಸಿಕೊಂಡಿದ್ದರು.

ಇದುವರೆಗೆ ಪಾಕಿಸ್ತಾನದಲ್ಲಿ 6,23,135 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿದೆ. 5,79.769 ಸೋಂಕಿತರು ಈಗಾಗಲೇ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 13,799 ಸಾರ್ವಜನಿಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಅಲ್ಲದೇ ಕಳೆದ 24ಗಂಟೆಗಳಲ್ಲಿ 2021ರಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 3,876 ಕೊರೊನೊ ಸೋಂಕಿತರು ಪತ್ತೆಯಾಗಿದ್ದಾರೆ. ಇದು ಸಹಜವಾಗಿ ಪಾಕಿಸ್ತಾನ ಆತಂಕ ಹೆಚ್ಚಿಸಿದೆ.

Exit mobile version