Visit Channel

ರಾಬರ್ಟ್ ವಾದ್ರಾಗೆ ಕೊರೋನಾ ಪಾಸಿಟಿವ್: ಪತ್ನಿ ಪ್ರಿಯಾಂಕಾ ಗಾಂಧಿ ಹೋಮ್ ಐಸೋಲೇಷನ್

priyanaka-new

ನವದೆಹಲಿ, ಎ. 02: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ ರಾಬರ್ಟ್​ ವಾದ್ರಾಗೆ ಕೋವಿಡ್​ ಸೋಂಕು ದೃಢವಾಗಿದೆ. ಈ ಹಿನ್ನಲೆ ಪ್ರಿಯಾಂಕಾ ಗಾಂಧಿ ಕೂಡ ಹೋಮ್​ ಐಸೋಲೇಷನ್​ಗೆ ಒಳಗಾಗಿದ್ದಾರೆ. ತಮಗೆ ಕೊರೋನಾ ಸೋಂಕು ದೃಢಪಟ್ಟಿದ್ದರ ಕುರಿತು ರಾಬರ್ಟ್​ ವಾದ್ರಾ ಫೇಸ್​ಬುಕ್​ ಮೂಲಕ ಮಾಹಿತಿ ನೀಡಿದ್ದರು. ಲಕ್ಷಣ ರಹಿತ ಕೊರೋನಾ ಸೋಂಕು ಪತ್ತೆಯಾಗಿದ್ದು, ಪರೀಕ್ಷೆ ವೇಳೆ ಕೋವಿಡ್​ ದೃಢಪಟ್ಟಿರುವುದಾಗಿ ತಿಳಿಸಿದ್ದರು. ರಾಬರ್ಟ್​ ವಾದ್ರಾಗೆ ಸೋಂಕು ಪತ್ತೆಯಾದ ಹಿನ್ನಲೆ ಪ್ರಿಯಾಂಕಾ ಗಾಂಧಿ ಕೂಡ ಕ್ವಾರಂಟೈನ್​ಗೆ ಒಳಗಾಗಿದ್ದು, ಈ ಕುರಿತು ಟ್ವೀಟರ್​ನಲ್ಲಿ ತಿಳಿಸಿದ್ದಾರೆ.

ಮುಂದಿನ ಕೆಲವು ದಿನಗಳ ಕಾಲ ತಾವು ಪ್ರತ್ಯೇಕ ವಾಸದ ಮೊರೆ ಹೋಗುತ್ತಿದ್ದೇನೆ. ಈ ಹಿನ್ನಲೆ ಚುನಾವಣಾ ಕಾರ್ಯಗಳಿಂದ ದೂರ ಸರಿಯುತ್ತಿದ್ದೇನೆ. ಈ ಅನಾನುಕೂಲಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಪ್ರಿಯಾಂಕ ಗಾಂಧಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಕೇರಳ, ಅಸ್ಸಾಂ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್​ ನಾಯಕಿ ನಿರತರಾಗಿದ್ದಾರೆ. ಅಸ್ಸಾಂನಲ್ಲಿ ಸಕ್ರಿಯ ಚುನಾವಣಾ ಪ್ರಚಾರ ನಡೆಸುವ ಮೂಲಕ ಪ್ರಿಯಾಂಕಾ ಗಾಂಧಿ ವಾದ್ರಾ ಮತಯಾಚನೆಯಲ್ಲಿ ತೊಡಗಿದ್ದಾರೆ. ಅಸ್ಸಾಂನಲ್ಲಿ ಎರಡು ಬಾರಿ ಚುನಾವಣಾ ಪ್ರವಾಸ ನಡೆಸಿರುವ ಅವರು ನಾಳೆಯಿಂದ ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರ ಸಮಾವೇಶ ನಡೆಸಲು ತಯಾರಿಸಿದ್ದರು. ಅಲ್ಲದೇ ನಾಳೆ ಅವರು ತಮಿಳುನಾಡಿನ ಕಂಚಿಪುರಂನ ಪೆರಂಬದೂರಿಗೆ ಅವರು ಭೇಟಿ ನಿಗದಿಯಾಗಿತ್ತು.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.