ಕೊರೊನಾ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ; ಜನತೆಗೆ ಸಚಿವ ಸುಧಾಕರ್ ಮನವಿ

ಬೆಂಗಳೂರು, ಏ. 21: ಕೊರೊನಾ ಸೋಂಕು ಹರಡುವಿಕೆಯ ಚೈನ್ ಲಿಂಕ್ ಮುರಿಯಲ 14 ದಿನಗಳುಬೇಕಿದ್ದು, ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಬಿಗಿಕ್ರಮಕ್ಕೆ ಒತ್ತು ನೀಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನಿನ್ನೆ ರಾತ್ರಿಯೇ ಸಿಎಸ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ರಾಜ್ಯದ ಜನರು ಕಟ್ಟು ನಿಟ್ಟಾಗಿ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು.

ಕೊರೊನಾ ಸೂಕ್ತ ಚಿಕಿತ್ಸೆ ನೀಡಲಾಗುವುದು. ಅಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯ ಇರುವ ಕಡೆ ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇನ್ನೂ ರಾಜ್ಯದಲ್ಲಿ ರೆಮಿಡಿಸಿವಿರ್ ಪೂರೈಕೆಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವರು, ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪಿಸಿದ್ದು, ಸಿಬ್ಬಂದಿಗಳು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ‌

Exit mobile version