ಕೊರೋನಾ ಎರಡನೇ ಅಲೆಯ ಆರ್ಭಟ: ಒಂದೇ ದಿನದಲ್ಲಿ ಸುಮಾರು ಒಂದೂವರೆ ಲಕ್ಷ ಹೊಸ ಕೇಸ್ ಪತ್ತೆ

ನವದೆಹಲಿ,ಏ. 10: ದೇಶದಲ್ಲಿ ಕೊರೋನಾ ಎರಡನೇ ಅಲೆ ಭೀಕರವಾಗಿ ಹರಡುತ್ತಿದ್ದು, ಕಳೆದ ೨೪ ಗಂಟೆಯಲ್ಲಿ ಸುಮಾರು ಒಂದೂವರೆ ಲಕ್ಷಗಳಷ್ಟು ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೌದು ಶುಕ್ರವಾರ 1,45,384 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 77,567 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,32,05,926ಕ್ಕೆ ಏರಿಕೆ ಆಗಿದೆ.‌ ಒಂದೇ ದಿನ ಕೊರೋನಾಗೆ 794 ಜನರು ಬಲಿ ಆಗಿದ್ದಾರೆ. ಸದ್ಯ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈವರೆಗೆ ಕೊರೋನಾ ರೋಗದಿಂದ ಮೃತಪಟ್ಟವರ ಸಂಖ್ಯೆ 1,68,436ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 9,80,75,160 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.

ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ.

Exit mobile version